ಚಿತ್ರದುರ್ಗ,ನವೆಂಬರ್,30,2020(www.justkannada.in): ಲಂಚ ಸ್ವೀಕರಿಸುತ್ತಿದ್ದ ವೇಳೆ ತಹಶೀಲ್ದಾರ್ ಮತ್ತು ಆರ್ ಐ ರೆಡ್ ಹ್ಯಾಂಡ್ ಆಗಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಮೊಳಕಾಲ್ಮೂರು ತಹಶೀಲ್ದಾರ್ ಮಲ್ಲಿಕಾರ್ಜುನ್ ಮತ್ತು ಆರ್ ಐ ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ. ರಸ್ತೆ ನಿರ್ಮಾಣ ಗುತ್ತಿಗೆದಾರ ಪ್ರೀತಂ ಎಂಬುವವರ ಬಳಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಇಂದು ಕಚೇರಿಯಲ್ಲಿ ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ.
ಎಸಿಬಿ ಎಸ್ ಪಿ ಜಯ ಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು ಇದೀಗ ಇಬ್ಬರು ಅಧಿಕಾರಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
Key words: Tahsildar – RI –ACB- trap -bribed.