ಬೆಂಗಳೂರು,ಮೇ,26,2021(www.justkannada.in): ಕೊರೋನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಿಸಿಸಿ ಆರಂಭಿಸಿ ಎಂದು ಗ್ರಾಮಪಂಚಾಯತ್ ಅಧ್ಯಕ್ಷರು ಮತ್ತು ಪಿಡಿಒಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಖಡಕ್ ಸೂಚನೆ ನೀಡಿದರು.
ಗ್ರಾಮಾಂತರ ಪ್ರದೇಶಗಳಲ್ಲಿ ಕೋವಿಡ್ ನಿರ್ವಹಣೆ ಕುರಿತಂತೆ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಕೊರೋನಾ ಹೆಚ್ಚಿರುವ ಗ್ರಾಮಪಂಚಾಯತ್ ಗಳ ಅಧ್ಯಕ್ಷರು, ಪಿಡಿಒಗಳ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಚರ್ಚಿಸಿದರು.
ಈ ವೇಳೆ ಮಾತನಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಕೋವಿಡ್ ಟೆಸ್ಟ್ ಹೆಚ್ಚಿಸಿ. ಹಳ್ಳಿಗಳಲ್ಲಿ ಕೊರೋನಾ ಕಂಟ್ರೋಲ್ ಮಾಡಿ. ಹಳ್ಳಿಗಳಿಗೆ ನಗರಪ್ರದೇಶದಿಂದ ಬಂದವರಿಗೆ ಕೊರೋನಾ ಟೆಸ್ಟ್ ಮಾಡಿಸಿ. ನೆಗೆಟಿವ್ ವರದಿ ಬಂದರೇ ಮಾತ್ರ ಗ್ರಾಮಕ್ಕೆ ಪ್ರವೇಶ ನೀಡಿ. ಪಾಸಿಟಿವ್ ಬಂದರೇ ಕ್ವಾರಂಟೈನ್ ಕೇಂದ್ರಕ್ಕೆ ಸೇರಿಸಿ ಎಂದು ಸೂಚನೆ ನೀಡಿದರು.
ಹಾಗೆಯೇ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಿಸಿಸಿ ಆರಂಭಿಸಿ. ಜ್ವರ, ಕೆಮ್ಮು ಇರುವವರನ್ನು ಪ್ರತ್ಯೇಕವಾಗಿ ಇರಿಸಿ ಎಂದು ಸಿಎಂ ಬಿಎಸ್ ವೈ ಸೂಚನೆ ನೀಡಿದರು.
Key words: Take- strict action -corona control- CM BS Yeddyurappa- Grama panchayath –Chairman- PDOs