ನವದೆಹಲಿ,ಏಪ್ರಿಲ್, 4,2024 (www.justkannada.in): ರಾಜ್ಯದಲ್ಲಿ ಸರಿಯಾಗಿ ಮುಂಗಾರು ಮಳೆಯಾಗದೇ ಬರಗಾಲ ಆವರಿಸಿದ್ದು ಬೆಂಗಳೂರು ಸೇರಿ ಹಲವೆಡೆ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ. ಈ ಮಧ್ಯೆಯೂ ತಮಿಳುನಾಡು ಸರ್ಕಾರ ಇದೀಗ ಮತ್ತೆ ಕಾವೇರಿ ನೀರಿಗಾಗಿ ಖ್ಯಾತೆ ತೆಗೆದಿದೆ.
ಈ ಬಾರಿ ಮಳೆ ಕೈಕೊಟ್ಟ ಹಿನ್ನೆಲೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ ಎಸ್ ಜಲಾಶಯ ಭರ್ತಿಯಾಗದೇ ಕುಡಿಯುವ ನೀರಿಗೂ ಸಂಕಷ್ಟದ ಸ್ಥಿತಿ ಎದುರಾಗಿದೆ. ಈ ಮಧ್ಯೆಯೂ ಮೂರು ತಿಂಗಳ ಬಾಕಿ ಇರುವ ನೀರನ್ನ ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸೂಚಿಸುವಂತೆ ಸಿಡಬ್ಲ್ಯುಎಂಎ( ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ) ಸಭೆಯಲ್ಲಿ ತಮಿಳುನಾಡು ಆಗ್ರಹಿಸಿದೆ.
ಬಾಕಿ ಉಳಿದಿರುವ 10 ಟಿಎಂಸಿ ನೀರನ್ನ ಬಿಡುಗಡೆ ಮಾಡಲು ಕರ್ನಾಟಕಕ್ಕೆ ಸೂಚಿಸುವಂತೆ ತಮಿಳುನಾಡು ಸರ್ಕಾರ ಸಭೆಯಲ್ಲಿ ಒತ್ತಾಯಿಸಿದೆ. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಕರ್ನಾಟಕದ ಅಧಿಕಾರಿಗಳು, ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಹೀಗಾಗಿ ನೀರು ಬೇಕಾಗಿರುವುದರಿಂದ ನೀರು ಪೂರೈಕೆ ಸಾಧ್ಯವಿಲ್ಲ ಎಂದು ವಾದ ಮಂಡಿಸಿದ್ದಾರೆ.
Key words: Tamil Nadu, Cauvery, water