ಮೈಸೂರು,ಸೆಪ್ಟಂಬರ್,3,2021(www.justkannada.in): ಕರ್ನಾಟಕದಿಂದ ತಮಿಳುನಾಡಿಗೆ 30 ಟಿ ಎಂ ಸಿ ನೀರು ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿರುವ ಕಾವೇರಿ ನೀರು ನಿರ್ವಹಣಾ ಮಂಡಳಿ ಪ್ರಾಧಿಕಾರದ ವಿರುದ್ಧ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ವತಿಯಿಂದ ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನೆಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ತಲೆಯ ಮೇಲೆ ಚಪ್ಪಡಿ ಕಲ್ಲು ಹೊತ್ತುಕೊಂಡು ಧರಣಿ ನಡೆಸಿದ ಪ್ರತಿಭಟನಾಕಾರರು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ವಿರುದ್ಧ ಘೋಷಣೆ ಕೂಗಿದರು.
ಇದೇ ವೇಳೆ ಕೂಡಲೇ ಪ್ರಾಧಿಕಾರ ರದ್ದು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರತಿಭಟನಾಕಾರರು ಒತ್ತಾಯ ಮಾಡಿದರು. ಇತ್ತೀಚೆಗೆ ನಡೆದ ಕಾವೇರಿ ನೀರು ನಿರ್ವಹಣಾ ಮಂಡಳಿ ಪ್ರಾಧಿಕಾರ ಸಭೆಯಲ್ಲಿ ತಮಿಳುನಾಡಿಗೆ 30.6 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಲಾಗಿತ್ತು.
Key words: Tamil Nadu -releases -30 TMC – wateter-order-Protest – Mysore