ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ: ತಮಗೆ ತಾವೇ ಚಾಟಿಯಲ್ಲಿ ಹೊಡೆದುಕೊಂಡ ಅಣ್ಣಾಮಲೈ

ಕೊಯಮತ್ತೂರು,ಡಿಸೆಂಬರ್,27,2024 (www.justkannada.in): ವಿದ್ಯಾರ್ಥಿನಿ ಮೇಲೆ ಅತ್ಯಾಚಾರಖಂಡಿಸಿ ಪ್ರತಿಭಟನೆ ನಡೆಸಿದ ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ  ಅವರು ತಮಗೆ ತಾವೇ ಚಾಟಿಯಲ್ಲಿ ಹೊಡೆದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚೆನ್ನೈ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ನಿಭಾಯಿಸುವಲ್ಲಿ ಆಡಳಿತಾರೂಢ ಡಿಎಂಕೆ ಮತ್ತು ಪೊಲೀಸ್ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ ಕೆ.ಅಣ್ಣಾಮಲೈ ಅವರು, ತಮಗೆ ತಾವೇ ಚಾಟಿಯಲ್ಲಿ  ಹೊಡೆದುಕೊಂಡು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ‘ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯ ಹೆಸರನ್ನು ರಾಜ್ಯ ಪೊಲೀಸರು ಉದ್ದೇಶಪೂರ್ವಕವಾಗಿಯೇ ಬಹಿರಂಗಪಡಿಸಿದ್ದು, ಎಫ್‌ಐಆರ್ ಸೋರಿಕೆಯಾಗಿದೆ’ ಎಂದು ಅಣ್ಣಾಮಲೈ ಆರೋಪಿಸಿದ್ದಾರೆ.

ಕೊಯಮತ್ತೂರಿನ ತಮ್ಮ ನಿವಾಸದ ಮುಂದೆ ಅಣ್ಣಾಮಲೈ ಚಾಟಿಯಲ್ಲಿ ಹೊಡೆದುಕೊಳ್ಳುವ ಮೂಲಕ ಪ್ರತಿಭಟಿಸಿದ್ದು ವಿಡಿಯೋ ವೈರಲ್ ಆಗಿದೆ.  ಇನ್ನು ರಾಜ್ಯದಲ್ಲಿ ಡಿಎಂಕೆ ಪಕ್ಷವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೂ ಚಪ್ಪಲಿ ಧರಿಸುವುದಿಲ್ಲ ಎಂದು ಗುರುವಾರದಂದು ಅಣ್ಣಾಮಲೈ ಪ್ರತಿಜ್ಞೆ ಮಾಡಿದ್ದರು. ಅಣ್ಣಾ ವಿಶ್ವವಿದ್ಯಾಲಯದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ.

Key words: student, rape, case, Tamilnadu,  Annamalai, protest