ನವದೆಹಲಿ,ಫೆಬ್ರವರಿ,1,2025 (www.justkannada.in): ಕೇಂದ್ರ ಸರ್ಕಾರವು ಕೇಂದ್ರ ಬಜೆಟ್ ನಲ್ಲಿ ಮಧ್ಯಮ ವರ್ಗ ಹಾಗೂ ವೇತನದಾರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.
ಇಂದು ಕೇಂದ್ರ ಬಜೆಟ್ ಮಂಡನೆ ಮಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 12 ಲಕ್ಷದವರೆಗೆ ಆದಾಯ ತೆರಿಗೆ ವಿನಾಯ್ತಿ ಘೋಷಣೆ ಮಾಡಿದ್ದಾರೆ. 12 ಲಕ್ಷದವರೆಗೆ ಆದಾಯ ತೆರಿಗೆ ಇಲ್ಲ. ವಾರ್ಷಿಕ ಆದಾಯ 12 ಲಕ್ಷದವರೆಗೂ ತೆರಿಗೆ ವಿನಾಯಿತಿ ನೀಡಲಾಗಿದೆ
ಈ ಮೂಲಕ ಬಜೆಟ್ ನಲ್ಲಿ ಮಧ್ಯಮವರ್ಗಕ್ಕೆ ಗಿಫ್ಟ್ ನೀಡಿದ್ದಾರೆ. ಇನ್ನು ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Key words: Good news, taxpayers, Union Budget