ಬೆಂಗಳೂರು,ಜು,31,2020(www.justkannada.in): ಶಿಕ್ಷಕ ಸ್ನೇಹಿಯಾದ, ಶಿಕ್ಷಣ ಸ್ನೇಹಿಯಾದ ವರ್ಗಾವಣಾ ನೀತಿಯು ಅನುಷ್ಠಾನಗೊಳ್ಳುವ ಸಮಯ ಸನ್ನಿಹಿತವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಶಿಕ್ಷಕರ ವರ್ಗಾವಣೆ ಸಂಬಂಧ ಇಂದು ಅಧಿಕಾರಿಗಳ ಜತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಭೆ ನಡೆಸಿ ಚರ್ಚಿಸಿದರು. ಕೂಡಲೇ ವರ್ಗಾವಣಾ ವೇಳಾಪಟ್ಟಿಯನ್ನು ಪ್ರಕಟಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಕುರಿತು ಫೇಸ್ ಬುಕ್ ನಲ್ಲಿ ವಿಷಯ ಹಂಚಿಕೊಂಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಶಿಕ್ಷಕರ ವರ್ಗಾವಣಾ ನಿಯಮಗಳನ್ನು ಶಿಕ್ಷಣ ಇಲಾಖೆಯು ಅಂತಿಮಗೊಳಿಸಿದೆ. ಕಳೆದ ಅಧಿವೇಶನದಲ್ಲಿ ಈ ಕಾಯ್ದೆಗೆ ಅನುಮೋದನೆ ದೊರಕಿತ್ತು. ಶಿಕ್ಷಕ ಸ್ನೇಹಿಯಾದ, ಶಿಕ್ಷಣ ಸ್ನೇಹಿಯಾದ ವರ್ಗಾವಣಾ ನೀತಿಯು ಅನುಷ್ಠಾನಗೊಳ್ಳುವ ಸಮಯ ಸನ್ನಿಹಿತವಾಗಿದೆ ಎಂದು ಹೇಳಿದ್ದಾರೆ.
ಇಂದು ಅಧಿಕಾರಿಗಳ ಸಭೆ ನಡೆಸಿ ಕೂಡಲೇ ವರ್ಗಾವಣಾ ವೇಳಾಪಟ್ಟಿಯನ್ನು ಪ್ರಕಟಿಸಬೇಕೆಂದು ಸೂಚನೆ ನೀಡಿದ್ದೇನೆ. ಕಳೆದ ಬಾರಿ ಕಡ್ಡಾಯ ವರ್ಗಾವಣೆಯಿಂದ ತೊಂದರೆಗೀಡಾಗಿದ್ದ ಶಿಕ್ಷಕರು ಈ ಬಾರಿಯ ಮೊದಲ ಆದ್ಯತೆಯ ವರ್ಗಾವಣೆಯನ್ನು ಪಡೆಯಲಿದ್ದಾರೆ. ಈ ಬಾರಿ ಆಗಸ್ಟ್ 2020 ರ ಮಾಹೆಯಿಂದ ಶಿಕ್ಷಕರ ವರ್ಗಾವಣೆಯು ಅನುಷ್ಠಾನಗೊಳ್ಳಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
Key words: Teacher- Transfer -Implementation-Education Minister -Suresh Kumar