ಬೆಂಗಳೂರು ಗ್ರಾಮಾಂತರ,ಡಿಸೆಂಬರ್,10,2024 (www.justkannada.in): ರಾಜ್ಯ ಸರ್ಕಾರವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಲ ಸ್ಮಾರಕ, ದೇವಾಲಯಗಳನ್ನು ರಾಜ್ಯ ಸಂರಕ್ಷಿತ ಸ್ಮಾರಕವನ್ನಾಗಿ ಘೋಷಿಸಲು ಮುಂದಾಗಿದ್ದು ಈ ಹಿನ್ನೆಲೆಯಲ್ಲಿ ಇದರಿಂದ ಬಾಧಿತರಾಗುವವರು ಆಕ್ಷೇಪಣೆಗಳನ್ನು ಸಲ್ಲಿಸಲು ಆಹ್ವಾನಿಸಲಾಗಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಡಾ.ಎನ್ ಶಿವಶಂಕರ ಅವರು, ಹೊಸಕೋಟೆ ತಾಲೂಕಿನ ದೊಡ್ಡ ಹುಲ್ಲೂರು ಗ್ರಾಮದ ಶ್ರೀ ಸೋಮೇಶ್ವರ ದೇವಾಲಯ(ಈಶ್ವರ ದೇವಾಲಯ), ದೇವನಹಳ್ಳಿ ತಾಲೂಕಿನ ನಲ್ಲೂರು ಗ್ರಾಮದ ಶ್ರೀ ಚೆನ್ನಕೇಶವ ದೇವಾಲಯ, ಕಸಬಾ ಹೋಬಳಿಯ ಖಾಸ್ಬಾಗ್ ಗ್ರಾಮದ ಶ್ರೀ ಮಹದೇಶ್ವರ ದೇವಾಲಯ, ದೊಡ್ಡಬಳ್ಳಾಪುರ ತಾಲ್ಲೂಕಿನ ತಿಪ್ಪೂರು ಗ್ರಾಮದ ಗಂಗಾಶೈಲಿಯ ವೀರಗಲ್ಲು ಸ್ಮಾರಕ, ದೇವಾಲಯಗಳನ್ನು ರಾಜ್ಯ ಸಂರಕ್ಷಿತ ಸ್ಮಾರಕವನ್ನಾಗಿ ಘೋಷಿಸಲು ಪ್ರಾಥಮಿಕ ಅಧಿಸೂಚನೆ ಹೊರಡಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಈ ಸ್ಮಾರಕಗಳನ್ನು ರಾಜ್ಯ ಸಂರಕ್ಷಿತ ಸ್ಮಾರಕ ಪ್ರದೇಶವೆಂದು ಘೋಷಿಸುವುದರಿಂದ ಭಾಧಿತರಾಗುವವರು ಆಕ್ಷೇಪಣೆಗಳನ್ನು ಡಿಸೆಂಬರ್ 24ರ ಒಳಗಾಗಿ ಸರ್ಕಾರದ ಕಾರ್ಯದರ್ಶಿಗಳು, ಪ್ರವಾಸೋದ್ಯಮ ಇಲಾಖೆ ಕೊಠಡಿ ಸಂಖ್ಯೆ 05, ನೆಲ ಮಹಡಿ, ವಿಕಾಸಸೌಧ, ಬೆಂಗಳೂರು-56001 ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Key words: temples, state protected monuments, objections