ಬೆಂಗಳೂರು, ಜೂ.7, 2020 (www.justkannada.in): ರಾಜ್ಯದಲ್ಲಿ ನಾಳೆಯಿಂದ ದೇವಾಸ್ಥಾನಗಳನ್ನು ತೆರೆಯಲು ರಾಜ್ಯ ಸರ್ಕಾರವು ಅವಕಾಶ ನೀಡಿದ್ದು , ಕೊರೊನಾವೈರಸ್ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದೇವಸ್ಥಾನಗಳಿಗ ಮಾರ್ಗಸೂಚಿ ಪ್ರಕಟಿಸಿದೆ .
ಮಾರ್ಗಸೂಚಿಗಳು ಈ ಕೆಳಕಂಡಂತಿವೆ…
ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳು ದೇವಾಲಯಕ್ಕೆ ಪ್ರವೇಶಿಸುವ ದ್ವಾರಗಳಲ್ಲಿ ಕಡ್ಡಾಯವಾಗಿ ದೇಹದ ಉಷ್ಣತೆಯನ್ನು ತಪಾಸಣೆ ಮಾಡುವುದು
ಕೈಗಳಿಗೆ ಸ್ಯಾನಿಟೈಸರ್ ನೀಡುವುದು. ಭಕ್ತಾಧಿಗಳಲ್ಲಿ ದೇಹದ ಉಷ್ಣತೆ ಹೆಚ್ಚಾಗಿರುವುದು ಕಂಡುಬಂದಲ್ಲಿ ಅಂತಹ ವ್ಯಕ್ತಿಯು ದೇವಾಲಯ ಪ್ರವೇಶಕ್ಕೆ ಅವಕಾಶ ನೀಡುವಂತಿಲ್ಲ.
ಭಕ್ತಾಧಿಗಳು ಮಾಸ್ಕ್ ಗಳನ್ನು ಅಥವಾ ಬಾಯಿ ಮತ್ತು ಮೂಗನ್ನು ಮುಚ್ಚುವಂತೆ ಕರವಸ್ತ್ರಗಳನ್ನು ಕಡ್ಡಾಯವಾಗಿ ಧರಿಸಿರುವವರಿಗೆ ಮಾತ್ರ ದೇವಾಲಯಕ್ಕೆ ಪ್ರವೇಶ ಕಲ್ಪಿಸುವುದು.
ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳು ಕಡ್ಡಾಐವಾಗಿ ಸಾಮಾಜಿಕ ಅಂತರ ಕಾಪಾಡು ನಿಟ್ಟಿನಲ್ಲಿ ದೇವಾಲಯದಲ್ಲಿ ಅಗತ್ಯ ವ್ಯವಸ್ಥೆಯನ್ನು ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ.
ದೇವಾಲದಯ ಶೌಚಾಲಯಗಳನ್ನು ಆಗಿಂದ್ದಾಗ್ಗೆ ಸ್ವಚ್ಛಗೊಳಿಸುವುದು ಮತ್ತು ಕೋವಿಡ್ ವೈರಾಣು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು.