ಬೆಂಗಳೂರು,ಅಕ್ಟೋಬರ್,10,2020(www.justkannada.in) : ವಿದ್ಯಾಗಮ ಯೋಜನೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸೂಚಿಸಿದ್ದಾರೆ.
ವಿದ್ಯಾಗಮ ಯೋಜನೆಯಿಂದಾಗಿ ಅನೇಕ ಶಿಕ್ಷಕರು ಕೊರೊನಾಗೆ ತುತ್ತಾಗಿ ಬಲಿಯಾಗಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಈ ಕುರಿತು ಜಿಲ್ಲಾವಾರು ಸಂಪೂರ್ಣ ಮಾಹಿತಿ ಪಡೆಯುವವರೆಗೆ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದಾರೆ.
ಈ ಕುರಿತು ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಸಚಿವ ಸುರೇಶ್ ಕುಮಾರ್, ರಾಜ್ಯದಲ್ಲಿ ಜಾರಿ ತಂದಿರುವ #ವಿದ್ಯಾಗಮ ಕಾರ್ಯಕ್ರಮದ ಕುರಿತು ಕೆಲವು ವಲಯಗಳಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿರುವುದನ್ನು ಗಮನಿಸಿದ್ದೇನೆ.
#ವಿದ್ಯಾಗಮ ಸಮಾಜದ ಕೆಳಸ್ಥರದ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತವನ್ನು ಮನದಲ್ಲಿ ಇಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮ.
ಆದರೂ ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ ಅಂಶಗಳ ಸ್ವೀಕಾರ ಹಾಗೂ ಅದರ ಸಮರ್ಪಕ ವಿಶ್ಲೇಷಣೆ ಪೂರ್ಣಗೊಳ್ಳುವವರೆಗೂ ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.
key words : Temporary-breakdown-scheduling-Minister Suresh Kumar