ಬೆಂಗಳೂರು,ಜೂನ್,3,2023(www.justkannada.in): ಒಡಿಶಾದ ಬಹನಾಗ ನಿಲ್ದಾಣದ ಬಳಿ 3 ರೈಲುಗಳ ಡಿಕ್ಕಿಯಾಗಿ ಸಂಭವಿಸಿದ ದುರಂತದಲ್ಲಿ ಕನ್ನಡಿಗರು ಪಾರಾಗಿದ್ದು ಸದ್ಯ ಸೇಫ್ ಆಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕರ್ನಾಟಕದಿಂದ ಪ್ರಯಾಣ ಬೆಳಸಿದ್ದ ಕನ್ನಡಿಗರು ಸೇಫ್ ಆಗಿದ್ದಾರೆ. ದೇವರ ದಯೆಯಿಂದ ಎಲ್ಲರೂ ಸುರಕ್ಷಿತವಾಗಿದ್ದಾರೆ. ಘಟನಾ ಸ್ಥಳಕ್ಕೆ ರಾಜ್ಯ ರೈಲ್ವೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಪ್ರಯಾಣಿಕರ ಸುರಕ್ಷತೆ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ರೈಲ್ವೆ ಡಿಐಜಿ ಶಶಿಕುಮಾರ್ ಹೇಳಿದ್ದಾರೆ.
ಒಡಿಶಾದ ಬಾಲಸೋರ್ ಜಿಲ್ಲೆ ಬಹನಾಗ ಬಳಿ ಸಂಭವಿಸಿದ ರೈಲು ಅಪಘಾತದಲ್ಲಿ 230ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇನ್ನು ಅಪಘಾತ ಕೋರಮಂಡಲ್ ಎಕ್ಸಪ್ರೆಸ್, ಬೈಯಪ್ಪನಹಳ್ಳಿ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್-ಹೌರಾ ಎಕ್ಸಪ್ರೆಸ್ ಮತ್ತು ಗೂಡ್ಸ್ ರೈಲುಗಳ ಮಧ್ಯೆ ಸಂಭವಿಸಿದೆ. ಬೈಯಪ್ಪನಹಳ್ಳಿ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ (ಬೆಂಗಳೂರು) ಹೌರಾ ಎಕ್ಸ್ಪ್ರೆಸ್ ನಲ್ಲಿ 110 ಜನ ಕನ್ನಡಿಗರು ಕೂಡ ಪ್ರಯಾಣಿಸಿದ್ದು, ದುರಂತದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ 110 ಜನ ಬೈಯಪ್ಪನಹಳ್ಳಿ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್-ಹೌರಾ ಎಕ್ಸಪ್ರೆಸ್ನಲ್ಲಿ ಪ್ರಯಾಣಿಸುತ್ತಿದ್ದರು. ಇವರು ಬೆಂಗಳೂರಿನಿಂದ ಕೊನೆಯ S5, S6, S7 ಬೋಗಿಯಲ್ಲಿ ಪ್ರಯಾಣ ಮಾಡುತ್ತಿದ್ದರು.
ರೈಲು ನಿನ್ನೆ ಮಧ್ಯಾಹ್ನ ಕೋಲ್ಕತ್ತಾ ಬಳಿ ಇಂಜಿನ್ ಬದಲಿಸಿದೆ. ಇದರಿಂದ ಕಳಸ ತಾಲೂಕಿನ 110 ಜನ ರೈಲಿನ ಮೊದಲ ಬೋಗಿಗೆ ಶಿಫ್ಟ್ ಆಗಿದ್ದರು. ಮೊದಲ ಬೋಗಿಗೆ ಶಿಫ್ಟ್ ಆದ ಹಿನ್ನೆಲೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
Key words: Terrible-train -accident -case – Odisha-Kannadigas-safe.