ಮೈಸೂರು,ಜೂನ್,17,2023(www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ಪಠ್ಯ ಪರಿಷ್ಕರಣೆ ಮೂಲಕ ಹಿಂದಿನ ಬಿಜೆಪಿ ಸರ್ಕಾರ ಅಳವಡಿಸಿದ್ಧ ಕೆಲ ವಿಷಯಗಳನ್ನ ತೆಗೆದು ಹಾಕಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಗೀತಾ ಶಿವರಾಜ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಮೈಸೂರಿನ ಕುಕ್ಕರಹಳ್ಳಿಯಲ್ಲಿ ಮಾತನಾಡಿದ ಗೀತಾ ಶಿವರಾಜ್ಕುಮಾರ್, ಮಕ್ಕಳ ಅನುಕೂಲಕ್ಕೆ ಪಠ್ಯ ಪರಿಷ್ಕರಣೆ ಮಾಡಿದರೆ ತಪ್ಪೇನು? ಎಂದು ಸರ್ಕಾರದ ನಿರ್ಧಾರ ಸಮರ್ಥಿಸಿಕೊಂಡಿದ್ದಾರೆ.
ಪಠ್ಯ ಪುಸ್ತಕಗಳಲ್ಲಿ ಒಳ್ಳೆಯ ವಿಚಾರಗಳು ಮಾತ್ರ ಇರಬೇಕು. ಹೀಗಾಗಿ ಶಾಲಾ ಪಠ್ಯ ಪುಸ್ತಕದಲ್ಲಿ ಬದಲಾವಣೆಯಾದರೆ ಒಳ್ಳೆಯದು ಎಂದು ಗೀತಾ ಶಿವರಾಜ್ ಕುಮಾರ್ ಹೇಳಿದ್ದಾರೆ.
Key words: text book- revision – benefit – children- Geetha Shivraj Kumar-mysore