ಬೆಂಗಳೂರು,ಜೂ,10,2019(www.justkannada.in): ಇಂದು ನಿಧನರಾದ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಅವರ ಅಂತ್ಯಸಂಸ್ಕಾರ ಇಂದು ಸಂಜೆ ನಡೆಯಲಿದ್ದು ನಿವಾಸದ ಬಳಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡುವುದಿಲ್ಲ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.
ಈ ಕುರಿತು ಮಾತನಾಡಿರುವ ಗಿರೀಶ್ ಕಾರ್ನಾಡ್ ಅವರ ಪುತ್ರ ರಘು ಕಾರ್ನಾಡ್, ನಿವಾಸದ ಬಳಿ ಅಂತಿಮ ದರ್ಶನಕ್ಕೆ ಅವಕಾಶವಿಲ್ಲ. ಸ್ಮಶಾನದಲ್ಲಿ ಅಂತಿಮ ದರ್ಶನಕ್ಕೆ ಅವಕಾಶವಿರುತ್ತದೆ. ಅಪಾರ್ಟ್ ಮೆಂಟ್ ಬಳಿ, ಸಾರ್ವಜನಿಕರು ರಾಜಕಾರಣಿಗಳು ಬರುವುದು ಬೇಡ ಎಂದು ಮನವಿ ಮಾಡಿದ್ದಾರೆ. ಮನೆಯ ಬಳಿ ಸಾಕಷ್ಟು ಜನರು ಸೇರಿದರೆ ತೊಂದರೆ ಆಗುತ್ತದೆ ಎಂಬ ಉದ್ದೇಶದೊಂದಿಗೆ ಈ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ
ಇನ್ನು ಗಿರೀಶ್ ಕಾರ್ನಾಡ್ ಅವರ ಅಂತ್ಯಕ್ರಿಯೆ ಯಾವುದೇ ಧಾರ್ಮಿಕ ವಿಧಿವಿಧಾನಗಳಿಲ್ಲದೆ. ಸರ್ಕಾರಿ ಗೌರವಗಳಿಲ್ಲದೆ ಇಂದು ಬಯ್ಯಪ್ಪನಹಳ್ಳಿ ಕಲ್ಲಪಳ್ಳಿ ಚಿತಾಗಾರದಲ್ಲಿ ನೆರವೇರಲಿದೆ.
Key words: The funeral of writer Girish Karnad today without any religious rituals.
#funeral #GirishKarnad #today# without #religiousrituals.