ಬೆಂಗಳೂರು, ಸೆಪ್ಟೆಂಬರ್ 17, 2023 (www.justkannada.in): ನಾಳೆಯಿಂದ (ಸೋಮವಾರ) ಸಂಸತ್ತಿನ ವಿಶೇಷ ಅಧಿವೇಶನ ನಡೆಯಲಿದೆ.
ರಾಜ್ಯಸಭೆಯಲ್ಲಿ ಈಗಾಗಲೇ ಮಂಡಿಸಲಾಗಿರುವ ವಕೀಲರ (ತಿದ್ದುಪಡಿ) ಮಸೂದೆ-2023, ನಿಯತಕಾಲಿಕಗಳ ಪತ್ರಿಕಾ ಮತ್ತು ನೋಂದಣಿ ಮಸೂದೆ-2023 ಮತ್ತು ಅಂಚೆ ಕಚೇರಿ ಮಸೂದೆ-2023 ಅನ್ನು ಲೋಕಸಭೆಯಲ್ಲಿ ಮಂಡಿಸಲಾಗುವುದು ಎಂದು ಕೇಂದ್ರ ಸರ್ಕಾರ ಪ್ರಕಟಿಸಿದೆ.
ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿಗೆ ಸಂಬಂಧಿಸಿದ ಬದಲಾವಣೆಗಳೊಂದಿಗೆ ಅಧಿವೇಶನದ ವೇಳೆ ರಾಜ್ಯಸಭೆಯಲ್ಲಿ ಮಂಡಿಸಲಾದ ಮಸೂದೆಯನ್ನು ಚರ್ಚೆಗೆ ತರಲಾಗುತ್ತದೆ.
ಸಂಸತ್ತಿನ ಈ ವಿಶೇಷ ಅಧಿವೇಶನದಲ್ಲಿ ಸಂಸತ್ ಸಿಬ್ಬಂದಿಯ ಸಮವಸ್ತ್ರದ ಬಗ್ಗೆ ಪ್ರತಿಪಕ್ಷಗಳು ಚರ್ಚೆ ನಡೆಸುವ ಸಾಧ್ಯತೆ ಇದೆ.
ಜತೆಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ಯಶಸ್ವಿಯಾಗಿ ಮುಕ್ತಾಯಗೊಂಡ ಜಿ20 ಶೃಂಗಸಭೆಯ ವಿಷಯವನ್ನು ಆಡಳಿತ ಪಕ್ಷ ಪ್ರಸ್ತಾಪಿಸುವ ನಿರೀಕ್ಷೆಯಿದೆ.