ಬೆಂಗಳೂರು,ಡಿಸೆಂಬರ್, 23,2020(www.justkannada.in): ಬ್ರಿಟನ್ ನಲ್ಲಿ ಕೊರೋನಾ ರೂಪಾಂತರ ಪತ್ತೆಯಾದ ಬೆನ್ನಲ್ಲೆ ಎಲ್ಲೆಡೆ ಆತಂಕ ಭೀತಿ ಶುರುವಾಗಿದ್ದು, ಈ ಮಧ್ಯೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಶಾಲೆ ಆರಂಭದ ಬಗ್ಗೆ ಮತ್ತೆ ಸ್ಪಷ್ಟನೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಜನವರಿ 1 ರಿಂದ ಶಾಲೆ ಆರಂಭದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಸಿಇಒ, ಡಿಡಿಪಿಐ, ಡಿಡಿಪಿಒಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ರಾಜ್ಯದಲ್ಲಿ ಯಶಸ್ವಿಯಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಿದ್ದವು. ಇದಕ್ಕೆ ಜಿಲ್ಲಾಡಳಿತ ಮತ್ತು ಎಲ್ಲಾ ಇಲಾಖೆಗಳು ಸಹಕಾರ ನೀಡಿದ್ದವು. ಈ ಮಧ್ಯೆ ವಿದ್ಯಾಗಮ , ತರಗತಿ ಆರಂಭದ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಎಲ್ಲಾ ಇಲಾಖೆಗಳು ಸಹಕಾರ ನೀಡಬೇಕು ಎಂದರು.
ಇನ್ನು ಶಾಲೆಗೆ ಹಾಜರಾಗಲು ಪೋಷಕರ ಒಪ್ಪಿಗೆ ಪತ್ರ ಕಡ್ಡಾಯವಾಗಿದೆ. ಇಲ್ಲದಿದ್ದರೇ ಪ್ರವೇಶವಿರುವುದಿಲ್ಲ. ಶಾಲೆಗೆ ಮಕ್ಕಳನ್ನ ಕಳುಹಿಸಲು ಒತ್ತಾಯವಿಲ್ಲ. ಇನ್ನು ಶಿಕ್ಷಕರು 72 ಗಂಟೆ ಮುಂಚಿತವಾಗಿ ಕೋವಿಡ್ ಟೆಸ್ಟ್ ಮಾಡಿಸಬೇಕು. ಶಿಕ್ಷಕರು ಮಾಸ್ಕ್ ಮತ್ತು ಫೇಸ್ ಶೀಲ್ಡ್ ಹಾಕಬೇಕು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.
Key words: There is- no change – beginning – school-Minister- Suresh Kumar