ಬೆಂಗಳೂರು,ಡಿಸೆಂಬರ್,28,2020(www.justkannada.in): ನಿಗದಿಯಂತೆ ರಾಜ್ಯದಲ್ಲಿ ಜನವರಿ 1ರಿಂದಲೇ ಶಾಲಾ-ಕಾಲೇಜು ಆರಂಭಿಸಲಾಗುತ್ತಿದೆ. ಈ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಈಗಾಗಲೇ ನಿರ್ಧರಿಸಿದಂತೆ ಜನವರಿ 1ರಿಂದ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಿಸಲಾಗುತ್ತದೆ. ಈ ಬಗ್ಗೆ ಯಾವುದೇ ಬದಲಾವಣೆ ಇಲ್ಲ. ಯಾವುದೇ ಗೊಂದಲಕ್ಕೂ ಪೋಷಕರು ಒಳಗಾಗಬಾರದು ಎಂದು ಸ್ಪಷ್ಟ ಪಡಿಸಿದ್ದಾರೆ.
ಶಾಲೆ ಆರಂಭಿಸುವ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಶಾಲಾ ಆರಂಭದ ಬಗ್ಗೆ ಈಗಾಗಲೇ ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
englsih summary….
No change in date of commencing schools – CM BSY clarifies
Bengaluru, Dec. 28, 2020 (www.justkannada.in): Chief Minister B.S. Yedyurappa has clarified that schools and colleges will begin from January 1 as decided. There will be no change in this regard.
Speaking to the presspersons in Bengaluru today he said, “as decided earlier classes for SSLC and 2nd PUC will begin from January 1 and there will be no changes. Parents should not heed to rumours and fall into confusion.”
Keywords: Schools and Colleges to begin from January 1/ NO change/ Chief Minister B.S. Yedyurappa
Key words: There is- no change – school college- start – issue-CM BS Yeddyurappa