ಮೈಸೂರು,ಸೆಪ್ಟೆಂಬರ್,18,2020(www.justkannada.in) : ಮೈಸೂರು ದಸರಾವನ್ನು ಸರಳವಾಗಿ ಆಚರಿಸಲು ಮುಖ್ಯಮಂತ್ರಿಗಳ ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ದುಂದು ವೆಚ್ಚದ ಪ್ರಶ್ನೆಯೇ ಇಲ್ಲ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ದಸರಾ ಹತ್ತು ದಿನದ ಕಾರ್ಯಕ್ರಮವಾಗಿದೆ. ಹಾಗಾಗಿ, ಖರ್ಚು ವೆಚ್ಚಗಳು ಇರುತ್ತವೆ. ಇಷ್ಟಾದರೂ ಸಭೆಯಲ್ಲಿ ಸರಳ ಆಚರಣೆಗೆ ಒತ್ತು ನೀಡಿ ತೀರ್ಮಾನ ಕೈಗೊಳ್ಳುತ್ತೇವೆ. 5 ಕೋಟಿ ರೂ. ವನ್ನು ಮೂಡಾದವರು ಬಿಡುಗಡೆ ಮಾಡಿದ್ದಾರೆ. ಕಳೆದ ಬಾರಿಯ ದಸರಾ ಅನುದಾನದಲ್ಲೇ 8 ಕೋಟಿ ರೂ. ಅನುದಾನ ಬಾಕಿ ಇದೆ ಎಂದು ತಿಳಿಸಿದ್ದಾರೆ.
ಇಂದು ಸಂಜೆ ದಸರಾ ಕಮಿಟಿಗಳಿಗೆ ಸಂಬಂಧಪಟ್ಟಂತೆ ಸಭೆ
ಇಂದು ಸಂಜೆ ದಸರಾ ಕಮಿಟಿಗಳಿಗೆ ಸಂಬಂಧಪಟ್ಟಂತೆ ಸಭೆ ಕರೆಯಲಾಗಿದೆ. ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರು ಸೇರಿದಂತೆ ಆಹ್ವಾನಿತರಾಗುತ್ತಿರುವ ಆಯಾ ಇಲಾಖೆಯ ತಲಾ ಒಬ್ಬರು ಉದ್ಘಾಟಕರ ಹೆಸರನ್ನು ಆಯ್ಕೆ ಮಾಡಿ ಕಳುಹಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದರು.
key words : There-Dussehra-cost-Statement-Minister ST Somashekhar