ಬೆಂಗಳೂರು,ಜೂನ್,29,2021(www.justkannada.in): ಶಾಪಿಂಗ್ ಮಾಲ್ ತೆರೆಯಲು ಅನುಮತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಮಾನವಾಗಿಲ್ಲ. ಸಚಿವ ಸಂಪುಟ ಸಹದ್ಯೋಗಿಗಳ ಜತೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಮಾಲ್ ಗಳನ್ನ ತೆರೆಯಲು ಅನುಮತಿ ನೀಡುವಂತೆ ಮಾಲ್ ಅಸೋಸಿಯೇಷನ್ ಮನವಿ ಮಾಡಿದೆ. ಈ ಬಗ್ಗೆ ಸಚಿವರ ಜತೆ ಚರ್ಚಿಸುತ್ತೇನೆ. ಷರತ್ತು ವಿಧಿಸಿ ಅನುಮತಿ ನೀಡುವ ಬಗ್ಗೆ ಚರ್ಚಿಸುತ್ತೇನೆ ಎಂದರು.
ಭದ್ರಾ ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವ ವಿಚಾರ, ಇದಕ್ಕೆ ಕೇಂದ್ರ ಸರ್ಕಾರದ ಅನುಮತಿ ಬೇಕಿದೆ. ಈ ಬಗ್ಗೆ ಕೇಂದ್ರ ಸಚಿವರ ಜತೆ ಚರ್ಚಿಸುತ್ತೇನೆ. ಯೋಜನೆಯಲ್ಲಿ ಅಕ್ರಮವೆಸಗಿದರೆ ಅಧಿಕಾರಿಗಳನ್ನ ಹೊಣೆಗಾರರನ್ನಾಗಿ ಮಾಡುವುದಾಗಿ ಸಿಎಂ ಬಿಎಸ್ ವೈ ಎಚ್ಚರಿಕೆ ನೀಡಿದರು.
ಇನ್ನು ಎತ್ತಿನಹೊಳೆ ಯೋಜನೆ ಶೀಘ್ರವೇ ಪೂರ್ಣಗೊಳಿಸುತ್ತೇವೆ. ಸಾಲ ತಂದಿಯಾದರೂ ಪೂರ್ಣಗೊಳಿಸುತ್ತೇವೆ ಎಂದು ಸಿಎಂ ಬಿಎಸ್ ವೈ ತಿಳಿಸಿದರು.
Key words: Thinking –about- permission – shopping mall- CM BS yeddyurappa