ಚಿತ್ರದುರ್ಗ, 18, ಏಪ್ರಿಲ್ 2020 (www.justkannada.in): ರೈತರಿಗೆ ಕಳೆದ ವರ್ಷ 13 ಸಾವಿರ ಕೋಟಿ ರೂಪಾಯಿ ಸಾಲವನ್ನು ವಿತರಿಸಲಾಗಿತ್ತು. ಈ ವರ್ಷವೂ ಅಷ್ಟೇ ಪ್ರಮಾಣದ ಸಾಲವನ್ನು ನೀಡಲಾಗುವುದು ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಸಾಲ ನೀಡಲು ಸರ್ಕಾರದಿಂದ ಯಾವುದೇ ಅಡೆತಡೆಗಳು ಇರುವುದಿಲ್ಲ. ಈಗಾಗಲೇ ಸೂಚನೆ ನೀಡಲಾಗಿದ್ದು, ಪ್ರಕ್ರಿಯೆಗಳು ಎಂದಿನಂತೆ ನಡೆಯಲಿವೆ ಎಂದು ಸಚಿವರು ತಿಳಿಸಿದರು.
ರೈತರ ಮುಂಗಾರು ಹಂಗಾಮಿಗೆ ಕೃಷಿ ಚಟುವಟಿಕೆಯನ್ನು ಪ್ರಾರಂಭಿಸಲು ಹೊಸದಾಗಿ ಸಹಕಾರ ಬ್ಯಾಂಕುಗಳು ಹಾಗೂ ವ್ಯವಸಾಯ ಸೇವಾ ಸಹಕಾರ ಸೊಸೈಟಿಗಳಿಂದ ಸಾಲ ನೀಡಲು ಸರ್ಕಾರದಿಂದ ಸೂಚನೆ ನೀಡಲಾಗಿದ್ದು, ಈ ಬಗ್ಗೆ ಒಂದೆರಡು ದಿನಗಳಲ್ಲಿ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.