ನವದೆಹಲಿ,ಜನವರಿ,03,2021(www.justkannada.in) : ಬ್ರಿಟನ್‍ನಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.ಬ್ರಿಟನ್‍ನಿಂದ ಭಾರತಕ್ಕೆ ವಿಮಾನಗಳ ಮೂಲಕ ಆಗಮಿಸುವ ಪ್ರಯಾಣಿಕರಿಗೆ ಜ.8 ರಿಂದ 31 ರವರೆಗೆ ನೆಗೆಟಿವ್ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯವೆಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಬ್ರಿಟನ್ ನಲ್ಲಿ ಕೋವಿಡ್ -19 ಸಾಂಕ್ರಾಮಿಕ ಕೊರೋನಾ ವೈರಸ್ ರೂಪಾಂತರ ಕಂಡುಬಂದ ಹಿನ್ನೆಲೆಯಲ್ಲಿ, ಉಭಯ ದೇಶಗಳ ನಡುವಿನ ವಿಮಾನ ಸೇವೆಗಳನ್ನು ಡಿ.22 ರಂದು ಸ್ಥಗಿತಗೊಳಿಸಲಾಗಿತ್ತು. ಇದೀಗ ಜ 6 ರಂದು ಸೇವೆಗಳು ಪುನರಾರಂಭಗೊಳ್ಳಲಿವೆ.
ಬ್ರಿಟನ್‍ನಲ್ಲಿ ಕಂಡುಬಂದಿರುವ ಹೊಸ ರೂಪಾಂತರ ವೈರಸ್‍ನ ಸೋಂಕು 29 ಕ್ಕೂ ಹೆಚ್ಚು ಪ್ರಯಾಣಿಕರಲ್ಲಿ ವರದಿಯಾಗಿದೆ. ಆರೋಗ್ಯ ಸಚಿವಾಲಯ ಹೊರಡಿಸಿದ ಮಾರ್ಗಸೂಚಿಗಳಂತೆ ಜ 8 ಮತ್ತು 31 ರ ನಡುವೆ ಪ್ರಯಾಣಿಸುವ ಪ್ರಯಾಣಿಕರು ಭಾರತದ ವಿಮಾನ ನಿಲ್ದಾಣಗಳಿಗೆ ಆಗಮಿಸಿದಾಗ ಕಡ್ಡಾಯವಾಗಿ ಸ್ವಯಂ-ಪಾವತಿಸಿದ ಆರ್ ಟಿ-ಪಿಸಿಆರ್ ಪರೀಕ್ಷೆಗಳಿಗೆ ಒಳಪಡಬೇಕಾಗುತ್ತದೆ. ಸೋಂಕು ದೃಢಪಟ್ಟವರನ್ನು ಸಾಂಸ್ಥಿಕ ಆರೋಗ್ಯ ಆರೈಕೆ ಕೇಂದ್ರಗಳಲ್ಲಿ ಸಂಪರ್ಕ ತಡೆಯಲ್ಲಿರಿಸಲಾಗುತ್ತದೆ ಎಂದು ತಿಳಿಸಲಾಗಿದೆ.
key words : those-arriving-Britain-Covid test-mandatory-Central-Ministry-Health-NOTE …!