ಚಿತ್ರದುರ್ಗ,ಜುಲೈ,13,2021(www.justkannada.in): ವಿಷಯುಕ್ತ ಆಹಾರ ಸೇವಿಸಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆ ಇಸಾಮುದ್ರದಲ್ಲಿ ಈ ಘಟನೆ ನಡೆದಿದೆ. ತಿಪ್ಪಾನಾಯ್ಕ್ (46), ಪತ್ನಿ ಸುಧಾಬಾಯಿ (43) ಹಾಗೂ ವೃದ್ಧೆ ಗುಂಡಿ ಬಾಯಿ (75) ಮೃತಪಟ್ಟವರು. ಇನ್ನು ರಾಹುಲ್ (18) ಹಾಗೂ ರಮ್ಯಾ (16) ಅಸ್ವಸ್ಥರಾಗಿದ್ದು, ದಾವಣಗೆರೆ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ.
ಒಂದೇ ಕುಟುಂಬದ 5 ಮಂದಿ ವಿಷಾಹಾರ ಸೇವಿಸಿದ್ದಾರೆ. ಈ ವೇಳೆ ವಿಷಾಹಾರ ಸೇವಿಸಿದ ಮೂವರು ಸಾವನ್ನಪ್ಪಿದ್ದಾರೆ, ಮತ್ತಿಬ್ಬರು ಅಸ್ವಸ್ಥರಾಗಿದ್ದು, ದಾವಣಗೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Key words: Three -deaths – poisonous –food-chithradurga