ಬೆಂಗಳೂರು,ನವೆಂಬರ್,27,2020(www.justkannada.in): ಕುರುಬ ಸಮುದಾಯ ಅಭಿವೃದ್ಧಿ ನಿಗಮ ರಚನೆ ಸೇರಿ ಮೂರು ಬೇಡಿಕೆಗಳನ್ನ ಸಿಎಂ ಬಿಎಸ್ ಯಡಿಯೂರಪ್ಪ ಮುಂದೆ ಇಟ್ಟಿದ್ದೇವೆ ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ತಿಳಿಸಿದರು.
ಕಾಗಿನೆಲೆ ಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಸಚಿವರು ಹಾಗೂ ಶಾಸಕರ ನಿಯೋಗ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ, ಕುರುಬರನ್ನ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಸಚಿವರಾದ ಬಸವರಾಜ್ ಬೊಮ್ಮಾಯಿ. ವಿ.ಸೋಮಣ್ಣ. ವಿಧಾನ ಪರಿಷತ್ ಸದಸ್ಯರಾದ ವಿಶ್ವನಾಥ್ , ಎಂ.ಟಿ.ಬಿ ನಾಗರಾಜ್, ಶಂಕರ್ ಉಪಸ್ಥಿತರಿದ್ದರು.
ಬಳಿಕ ಮಾಧ್ಯಮದ ಜತೆ ಮಾತನಾಡಿದ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ಕುರುಬ ಸಮುದಾಯವನ್ನ ಎಸ್ ಟಿ ಸಮುದಾಯಕ್ಕೆ ಸೇರಿಸಲು ನಿರ್ಧಾರ. ಕುರುಬ ಅಭಿವೃದ್ದಿ ನಿಗಮ ಸ್ಥಾಪಿಸಿ 500 ಕೋಟಿ ರೂ. ಅನುದಾನ ನೀಡುವುದು. ನಾಲ್ವರು ಕುರುಬ ಶಾಸಕರ ಪೈಕಿ ಮೂವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಸಿಎಂ ಬಿಎಸ್ ವೈ ಮುಂದೆ ಬೇಡಿಕೆ ಇಟ್ಟಿದ್ದೇವೆ ಎಂದು ತಿಳಿಸಿದರು.
Key words: three – demand- CM bs yeddyurappa- MLC H. Vishwanath