ಬೆಂಗಳೂರು,ಸೆಪ್ಟಂಬರ್,27,2021(www.justkannada.in): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದಿರುವ ಘಟನೆ ಇಂದು ನಡೆದಿದೆ.
ಬೆಂಗಳೂರಿನ ಲಕ್ಕಸಂದ್ರದಲ್ಲಿ ಈ ಘಟನೆ ನಡೆದಿದ್ದು. ಕಟ್ಟಡ ಬೀಳುವ ಭೀಕರ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಮನೆಯಲ್ಲಿ 20ಕ್ಕೂ ಹೆಚ್ಚು ಜನರು ವಾಸವಿದ್ದ ಬಗ್ಗೆ ಮಾಹಿತಿ ಸಿಕ್ಕಿದ್ದು, ಮೆಟ್ರೋ ಕಾಮಗಾರಿಗೆ ಬಂದವರು ಇಲ್ಲಿ ವಾಸವಿದ್ದರು ಎನ್ನಲಾಗಿದೆ. ಸದ್ಯ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.
1974ರಲ್ಲಿ ಈ ಕಟ್ಟಡವನ್ನ ನಿರ್ಮಿಸಲಾಗಿದ್ದು ಸುರೇಶ್ ಎಂಬುವವರು ಇದರ ಮಾಲೀಕರಾಗಿದ್ದಾರೆ ಎನ್ನಲಾಗಿದೆ. ಹಳೇ ಕಟ್ಟಡ ಕುಸಿತದಿಂದ ಅಕ್ಕಪಕ್ಕದ ಮನೆಗಳಿಗೆ ಹಾನಿಯಾಗಿದೆ. ಕಟ್ಟಡ ಕುಸಿಯುವುದಕ್ಕಿಂತ ಕೆಲ ಸಮಯ ಮುನ್ನ ಅಗ್ನಿಶಾಮಕ ಸಿಬ್ಬಂದಿ ಕಾರ್ಮಿಕರನ್ನು ತೆರವುಗೊಳಿಸಿದ್ದರು. ಹೀಗಾಗಿ ಮೆಟ್ರೋ ಕಾರ್ಮಿಕರ ತೆರವಿನಿಂದ ಭಾರಿ ಅನಾಹುತ ತಪ್ಪಿದೆ. ಹಳೇ ಕಟ್ಟಡ ಕುಸಿಯುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ.
Key words: Three floor- building -collapses -Bengaluru