ಬೆಂಗಳೂರು, ಅಕ್ಟೋಬರ್ 21, 2021 (www.justkannada.in): ಈ ಬಾರಿಯೂ ಎಸ್ಎಸ್ಎಲ್ ಸಿ ಪರೀಕ್ಷೆ ವಿಳಂಬವಾಗುವ ಸಾಧ್ಯತೆ ಇದೆ.
ಶೈಕ್ಷಣಿಕ ಅವಧಿ ವಿಳಂಬ ಮತ್ತು ಪಠ್ಯ ಕ್ರಮ ಪೂರ್ಣಗೊಳಿಸಲು ಕಾಲವಕಾಶದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮೇ ಜೂನ್ ವೇಳೆಗೆ ನಡೆಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎನ್ನಲಾಗಿದೆ.
ಈ ಬಾರಿ ನವೆಂಬರ್ ಮುಗಿಯುತ್ತಿದ್ದರೂ ಪರೀಕ್ಷೆ ದಿನಾಂಕ ನಿಗದಿ ಅಧಿಸೂಚನೆ ಹೊರಡಿಸಿಲ್ಲ. ಹೀಗಾಗಿ ಈ ಬಾರಿಯೂ ಎಸ್ಎಸ್ಎಲ್ ಸಿ ಪರೀಕ್ಷೆ ವಿಳಂಬವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಪ್ರತಿ ವರ್ಷ ಮಾರ್ಚ್ ಕೊನೆಯ ವಾರದಿಂದ ಏಪ್ರಿಲ್ ಮೊದಲ ವಾರದೊಳಗೆ ಎಸ್ಎಸ್ಎಲ್ ಸಿ ಪರೀಕ್ಷೆ ಮುಗಿಯುತ್ತಿತ್ತು. ಆದರೆ ಈ ಬಾರಿ ವಿಳಂಬವಾಗುವುದು ನಿಚ್ಚಳವಾಗಿದೆ.