ಬೆಂಗಳೂರು, ಸೆಪ್ಟೆಂಬರ್ 19,2024 (www.justkannada.in): ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬ ಬಳಸಲಾಗುತ್ತದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿರುವ ಕುರಿತು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಭೀಮಾನಾಯ್ಕ್, ಅವರ ಹೇಳಿಕೆಗೂ, ನಮ್ಮ ನಂದಿನಿ ಬ್ರ್ಯಾಂಡ್ಗೂ ಸಂಬಂಧವಿಲ್ಲ. ಕಳೆದ 4 ವರ್ಷಗಳಿಂದ ನಂದಿನಿ ತುಪ್ಪ ಅಲ್ಲಿಗೆ ಹೋಗಿಲ್ಲ. ಈಗ ನಂದಿನಿ ತುಪ್ಪ ತಿರುಪತಿಗೆ ಸರಬರಾಜು ಮಾಡಲು ಶುರು ಮಾಡಿದ್ದೇವೆ. 2013-18ರ ಅವಧಿಯಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗ 3 ರಿಂದ 4 ಮೆಟ್ರಿಕ್ ಟನ್ ತುಪ್ಪ ಸರಬರಾಜು ಮಾಡಿದ್ದೇವೆ ಎಂದು ಸ್ಪಷ್ಟನೆ ನೀಡಿದರು.
ಟಿಟಿಡಿ ಹೊಸ ಅಧ್ಯಕ್ಷರು, ನಿರ್ದೇಶಕರೆಲ್ಲ ಸೇರಿ ನಂದಿನಿ ತುಪ್ಪ ಬೇಕು ಅಂತ ಮೇಲ್ ಮಾಡಿದ್ದರು. ಈ ಬಾರಿ ಟೆಂಡರ್ ನಲ್ಲಿ ಭಾಗವಹಿಸಲು ಹೇಳಿದ್ದರು. ಹೀಗಾಗಿ 3 ಲಕ್ಷದ 50 ಸಾವಿರ ಕೆ.ಜಿ ತುಪ್ಪವನ್ನ ಟೆಂಡರ್ ತೆಗೆದುಕೊಂಡಿದ್ದೇವೆ. ಮೊದಲ ಹಂತದಲ್ಲಿ 350 ಮೆಟ್ರಿಕ್ ಟನ್ ತುಪ್ಪವನ್ನ ಕಳೆದ ವಾರ ಸರಬರಾಜು ಮಾಡಿದ್ದೇವೆ ಎಂದು ಭೀಮನಾಯ್ಕ್ ತಿಳಿಸಿದ್ದಾರೆ.
Key words: Tirupati Laddu, Animal fat, Bhima Naik