ತಿರುಪತಿ ಲಡ್ಡು ವಿವಾದ: ವಿಶೇಷ ತನಿಖಾ ತಂಡ ರಚನೆಗೆ ಸುಪ್ರೀಂಕೋರ್ಟ್ ಆದೇಶ

ನವದೆಹಲಿ,ಅಕ್ಟೋಬರ್,4,2024 (www.justkannada.in): ತಿರುಪತಿ ಲಡ್ಡು ವಿವಾದಕ್ಕೆ ಸಂಬಂಧಿಸಿದಂತೆ  ತನಿಖೆಗೆ ವಿಶೇಷ ತನಿಖಾ ತಂಡ ರಚನೆಗೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.

ತಿರುಪತಿ ಲಡ್ಡು ವಿವಾದ ಕುರಿತ ಅರ್ಜಿಯ ವಿಚಾರಣೆಯು ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆವಿ ವಿಶ್ವನಾಥನ್ ಅವರ ಪೀಠದಲ್ಲಿ ನಡೆಯಿತು.  ಪ್ರಕರಣ ಸಂಬಂಧ ತನಿಖೆಗೆ ಸಿಬಿಐ, ರಾಜ್ಯ ಪೊಲೀಸ್ ಮತ್ತು ಎಫ್‌ಎಸ್‌ಎಸ್‌ಎಐ ಅಧಿಕಾರಿಗಳನ್ನು ಒಳಗೊಂಡಿರುವ ಹೊಸ ಐದು-ಸದಸ್ಯರ ಸ್ವತಂತ್ರ ಎಸ್‌ಐಟಿಯನ್ನು ರಚಿಸಲು ನ್ಯಾಯಪೀಠ ಸೂಚಿಸಿದೆ.

ಸಿಬಿಐ ನಿರ್ದೇಶಕರ ನೇತೃತ್ವದಲ್ಲಿ ಇಬ್ಬರು ಸಿಬಿಐ,  ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಐವರ ವಿಶೇಷ ತಂಡ ರಚನೆಗೆ ಸುಪ್ರೀಂಕೋರ್ಟ್ ಆದೇಶಿಸಿದೆ.  ಪ್ರಕರಣ ಕುರಿತು ತನಿಖೆಗೆ ಆಂಧ್ರ ಸರ್ಕಾರ ಎಸ್ ಐಟಿ ರಚನೆ ಮಾಡಿತ್ತು.  ಆಂಧ್ರಪ್ರದೇಶದ  ತಿರುಪತಿಯಲ್ಲಿ ಲಡ್ಡುಗಳನ್ನು ತಯಾರಿಸುವಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

Key words: Tirupati Laddu, case, Supreme Court, formation, special investigation team