ಬೆಂಗಳೂರು,ಡಿಸೆಂಬರ್,19,2020(www.justkannada.in): ರಾಜ್ಯದಲ್ಲಿ ಶಾಲಾ ಆರಂಭಕ್ಕೆ ತಾಂತ್ರಿಕ ಸಮಿತಿ ಗ್ರೀನ್ ಸಿಗ್ನಲ್ ನೀಡಿದ್ದು, ಈ ಹಿನ್ನೆಲೆ ಶಾಲೆ ಆರಂಭ ಕುರಿತು ಚರ್ಚಿಸಲು ಇಂದು ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಲಿದೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಅಧಿಕಾರಿಗಳು, ಶಿಕ್ಷಣ ತಜ್ಞರ ಮಹತ್ವದ ಸಭೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ. ಇಂದು ನಡೆಯುತ್ತಿರುವ ಸಿಎಂ ನೇತೃತ್ವದ ಸಭೆ ಮಹತ್ವದ್ದಾಗಿದ್ದು, ಜನವರಿ 1ರಿಂದ ರಾಜ್ಯದಲ್ಲಿ ಶಾಲೆಗಳು, ಪಿಯು ಕಾಲೇಜು ಆರಂಭಕ್ಕೆ ಅನುಮತಿ ಸಿಗುತ್ತದೆಯೇ ಎಂಬುದು ಗೊತ್ತಾಗಲಿದೆ.
ಈಗಾಗಲೇ ತಾಂತ್ರಿಕ ಶಿಕ್ಷಣ ಸಮಿತಿ ಹಾಗೂ ಆರೋಗ್ಯ ಇಲಾಖೆ ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭ ಕುರಿತಂತೆ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿವೆ. ಇಂದಿನ ಸಭೆ ಬಳಿಕ ರಾಜ್ಯದಲ್ಲಿ ಶಾಲಾ ಕಾಲೇಜು ಆರಂಭದ ಬಗ್ಗೆ ಮಹತ್ವದ ನಿರ್ಧಾರ ಹೊರ ಬೀಳುವ ಸಾಧ್ಯತೆ ಇದೆ.
ಇಂದು ನಡೆಯುವ ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
Keywords: Today – important –meeting- CM -school -opening.