ಬೆಂಗಳೂರು, ಅಕ್ಟೋಬರ್ 21, 2021 (www.justkannada.in): ಈಗಾಗಲೇ ಟಿ-20 ಸರಣಿ ವಶ ಪಡಿಸಿಕೊಂಡಿರುವ ಟೀಂ ಇಂಡಿಯಾ ಇಂದು ಮೂರನೇ ಪಂದ್ಯವನ್ನೂ ಗೆದ್ದು ವೈಟ್ ವಾಷ್ ಮಾಡಿಕೊಳ್ಳುವ ಉತ್ಸಾಹದಲ್ಲಿದೆ.
2ನೇ ಟಿ20 ಪಂದ್ಯ ಮುಗಿದ ಬಳಿಕ ರೋಹಿತ್ ಶರ್ಮಾ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯಕ್ಕೆ ತಂಡದಲ್ಲಿ ಬದಲಾವಣೆ ಮಾಡುವ ಸೂಚನೆ ನೀಡಿದ್ದರು.
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಇಂದು ಅಂತಿಮ ಪಂದ್ಯ ನಡೆಯಲಿದ್ದು, ರೋಹಿತ್ ಶರ್ಮಾ ಪಡೆ ಕ್ಲೀನ್ ಸ್ವಿಪ್ ನತ್ತ ಚಿತ್ತ ನೆಟ್ಟಿದೆ.
ರೋಹಿತ್ ಪಡೆಗೆ ಇದೊಂದು ಔಪಚಾರಿಕ ಪಂದ್ಯವಾದರೂ ಗೆಲುವು ಮಹತ್ವದ್ದಾಗಿದೆ. ಯಾಕಂದ್ರೆ ಇದು ರೋಹಿತ್ ಶರ್ಮಾ ಅವರಿಗೆ ನಾಯಕನಾಗಿ ಮೊದಲ ಸರಣಿ. ಜೊತೆಗೆ ಕೋಚ್ ರಾಹುಲ್ ದ್ರಾವಿಡ್ಗೂ ಇದು ಮೊದಲ ಸರಣಿಯಾಗಿದೆ.
ಕೆಎಲ್ ರಾಹುಲ್, ರಿಷಭ್ ಪಂತ್ ಮತ್ತು ರವಿಚಂದ್ರನ್ ಅಶ್ವಿನ್ಗೆ ವಿಶ್ರಾಂತಿ ನೀಡಿ ಓಪನರ್ ಆಗಿ ರೋಹಿತ್ ಶರ್ಮಾ ಜೊತೆ ರುತುರಾಜ್ ಗಾಯಕ್ವಾಡ್ ಇನ್ನಿಂಗ್ಸ್ ಆರಂಭಿಸುವ ನಿರೀಕ್ಷೆ ಇದೆ.