ಮಂಡ್ಯ,ಡಿಸೆಂಬರ್,19,2022(www.justkannada.in): ಕಬ್ಬು ಮತ್ತು ಹಾಲಿಗೆ ವೈಜ್ಞಾನಿಕ ಬೆಲೆ ಹಾಗೂ ಭತ್ತಕ್ಕೆ ಬೆಂಬಲ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಮಂಡ್ಯದಲ್ಲಿ ಕಳೆದ 41 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಇಂದು ಮಂಡ್ಯ ಬಂದ್ ಗೆ ಕರೆ ಕೊಟ್ಟಿದ್ದಾರೆ. ಬಂದ್ ಗೆ ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕರಾದ ದಿನೇಶ್ ಗೂಳಿಗೌಡ ಹಾಗೂ ದಕ್ಷಿಣ ಪದವೀಧರ ಕ್ಷೇತ್ರದ ಶಾಸಕ ಮಧು ಜಿ. ಮಾದೇಗೌಡ ಅವರು ಬೆಂಬಲ ಸೂಚಿಸಿದ್ದಾರೆ.
ನಮ್ಮ ಹೊಟ್ಟೆಯನ್ನು ತುಂಬಿಸುವ ರೈತರು ಇಂದು ಸಂಕಷ್ಟದಲ್ಲಿದ್ದಾರೆ. ಕಷ್ಟಪಟ್ಟು ಬೆಳೆದ ಬೆಳೆಗೆ ಉತ್ತಮ ಬೆಲೆ ಕಂಗಾಲಾಗಿದ್ದಾರೆ. ಕಬ್ಬು ಬೆಳೆಗೆ 4500 ರೂಪಾಯಿ ಬೆಲೆ ನಿಗದಿ ಹಾಗೂ ಕರಾವಳಿ ಭಾಗದ ಭತ್ತ ಬೆಳೆಗಾರರಿಗೆ ನೀಡುತ್ತಿರುವ 500 ರೂಪಾಯಿ ಬೆಂಬಲ ಬೆಲೆಯನ್ನು ಎಲ್ಲ ರೈತರಿಗೂ ನೀಡಬೇಕು. ಹಾಲಿಗೆ ರೂ.40 ದರವನ್ನು ನಿಗದಿಪಡಿಸಬೇಕು ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಮಂಡ್ಯ ಜಿಲ್ಲೆಯಲ್ಲಿ ರೈತರು ಮಂಡ್ಯ ಬಂದ್ ಮಾಡುವಂತೆ ಕರೆ ನೀಡಿದ್ದಾರೆ. ಇದಕ್ಕೆ ನಮ್ಮ ಬೆಂಬಲ ಇದೆ ಎಂದು ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕರಾದ ದಿನೇಶ್ ಗುಡಿ ಗೌಡ ಹಾಗೂ ದಕ್ಷಿಣ ಪದವೀಧರ ಕ್ಷೇತ್ರದ ಶಾಸಕರಾದ ಮಧು ಜಿ ಮಾದೇಗೌಡ ಹೇಳಿದ್ದಾರೆ.
ಸದನದಲ್ಲೂ ಪ್ರಸ್ತಾಪ
ರೈತರ ಇಂತಹ 10 ಹಲವು ಸಮಸ್ಯೆಗಳಿಂದ ರೈತರ ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಲು ಈಗಾಗಲೇ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಶಾಸಕರು ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ದಿನೇಶ್ ಗೂಳಿಗೌಡ, ರೈತರು ಅನೇಕ ಸಮಸ್ಯೆಗಳಲ್ಲಿ ಬಳಲುತ್ತಿದ್ದು, ಈ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡುತ್ತೇವೆ. ರೈತರು ನ್ಯಾಯಯುತ ಬೇಡಿಕೆಯನ್ನು ಇಟ್ಟಿದ್ದು, ಇದನ್ನು ಸರ್ಕಾರ ಈಡೇರಿಸಲೇಬೇಕಿದೆ. ಹೀಗಾಗಿ ರೈತರ ಮನವಿಗೆ ಸರ್ಕಾರ ಸ್ಪಂದಿಸಬೇಕೆಂದು ನಾವು ಸಹ ಪಟ್ಟು ಹಿಡಿದು ಕೇಳುತ್ತೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
Key words: Today -Mandya –Bandh- MLC Dinesh Gooligowda- Madhu Madegowda- support