ಬೆಂಗಳೂರು,ಜುಲೈ,27,2023(www.justkannada.in): ಉಡುಪಿ ಕಾಲೇಜಿನಲ್ಲಿ ಶೌಚಾಲಯದಲ್ಲಿ ವಿಧ್ಯಾರ್ಥಿನೀಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೊಮೋಟೋ ದಾಖಲಿಸಿಕೊಂಡಿದ್ದಾರೆ. ತನಿಖೆ ಆಗುತ್ತೆ, ಸತ್ಯಾ ಸತ್ಯತೆ ಹೊರ ಬರುತ್ತೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್, ಸ್ನೇಹಿತರಲ್ಲಿ ಇಂತಹ ಘಟನೆಗಳು ನಡೆಯುತ್ತೆ, ಅದೆಲ್ಲ ಅಲ್ಲಿಗೆ ಬಿಟ್ಟು ಹೋಗುತ್ತಿತ್ತು . ಅಂತಹ ಘಟನೆ ಕುರಿತು ಪ್ರಿನ್ಸಿಪಾಲ್ ಗೆ ಬಿಡಬೇಕು. ಅದಕ್ಕೆ ಅವರನ್ನ ಸಸ್ಪೆಂಡ್ ಮಾಡೋದಾದರೇ ಅಥವಾ ಇನ್ನು ಹೆಚ್ಚಿನ ಕ್ರಮ ಬೇಕು ಅಂದರೆ ತೆಗೆದುಕೊಳ್ಳುತ್ತಾರೆ. ಅವರಿಗೆ ಬಿಟ್ಟಿದ್ದು. ನಾವು ಇದಕ್ಕೆ ಮಧ್ಯಪ್ರವೇಶ ಮಾಡಬಾರದು . ಈಗಾಗಲೇ ಮೂವರು ವಿದ್ಯಾರ್ಥಿನೀಯರನ್ನ ಸಸ್ಪೆಂಡ್ ಮಾಡಿದ್ದಾರೆ ಎಂದರು.
Key words: toilet- Video- shooting –case -investigation – Home Minister -Dr. G. Parameshwar.