ಟೋಕಿಯೋ,ಆಗಸ್ಟ್,5,2021(www.justkannada.in): ಜಪಾನ್ ಟೋಕಿಯೋದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಲಭಿಸಿದೆ. ಕುಸ್ತಿಪಟು ರವಿಕುಮಾರ್ ದಹಿಯಾ ಪುರುಷರ ಕುಸ್ತಿ ವಿಭಾಗದಲ್ಲಿ ಬೆಳ್ಳಿಪದಕಕ್ಕೆ ಮುತ್ತಿಕ್ಕಿದ್ದಾರೆ.
ಫೈನಲ್ ಪಂದ್ಯದಲ್ಲಿ ರಷ್ಯಾದ ಝುವರ್ ಉಗ್ವೆವಿರುದ್ಧ ಸೋಲು ಕಂಡಿದ್ದು, ಕುಸ್ತಿಪಟು ರವಿಕುಮಾರ್ ದಹಿಯಾ ಈ ಮೂಲಕ ಬೆಳ್ಳಿ ಪದಕಕ್ಕೆ ಅರ್ಹರಾಗಿದ್ದಾರೆ. 57 ಕೆಜಿ ವಿಭಾಗದಲ್ಲಿ 2ನೇ ಸ್ಥಾನ ಪಡೆದುಕೊಳ್ಳುವ ಮೂಲಕ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಚಿನ್ನದ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ರವಿಕುಮಾರ್ ದಹಿಯಾ ಸೋಲು ಅನುಭವಿಸಿದ್ಧಾರೆ. ಫೈನಲ್ನಲ್ಲಿ ಸೋಲು ಕಂಡರೂ ಬೆಳ್ಳಿ ಪದಕದೊಂದಿಗೆ ಭಾರತಕ್ಕೆ ಮರಳಲಿದ್ದಾರೆ. ಭಾರತಕ್ಕೆ ಒಟ್ಟು 5 ಪದಕಗಳು ಬಂದಂತಾಗಿದೆ.
Key words: Tokyo Olympics- india Ravi Kumar Dahiya-silver medal- wrestler