ಶಿರಸಿ,ಮಾರ್ಚ್,6,2021(www.justkannada.in): ಸಾರ್ವಜನಿಕ ಜೀವನದಲ್ಲಿರುವ ನಾವು ಸೋಲನ್ನಾದರೂ ಸಹಿಸಿಕೊಳ್ಳುತ್ತೇವೆ. ಆದರೆ, ವೈಯಕ್ತಿಕ ತೇಜೋವಧೆ ಸಹಿಸುವುದಿಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದರು.
ತಮ್ಮ ವಿರುದ್ಧದ ಆಕ್ಷೇಪಾರ್ಹ ಸುದ್ದಿ ಪ್ರಸಾರ ತಡೆಗೆ ಕೋರ್ಟ್ ಮೊರೆ ಹೋಗಿರುವ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಚಿವ ಶಿವರಾಂ ಹೆಬ್ಬಾರ್, ‘ರಮೇಶ ಜಾರಕಿಹೋಳಿ ಇಂದಲ್ಲ ನಾಳೆ ತಪ್ಪಿತಸ್ಥರಲ್ಲ ಎಂದು ಸಾಬೀತಾಗಬಹುದು. ಆದರೆ, ಹಾಳುಮಾಡಿದ ಅವರ ಗೌರವ ತಂದುಕೊಡಲು ಸಾಧ್ಯವೆ? ಇದೇ ಸ್ಥಿತಿ ಉಳಿದ ನಾಯಕರಿಗೂ ಎದುರಾಗಬಹುದು. ಹೀಗಾಗಿ, ಮುನ್ನೆಚ್ಚರಿಕೆ ನಮಗೂ ಅನಿವಾರ್ಯವಾಗಿದೆ ಎಂದು ತಿಳಿಸಿದರು.
ಸರ್ಕಾರ ರಚನೆಗೆ ಸಹಕಾರ ನೀಡಿದ ಸಚಿವರನ್ನು ಟಾರ್ಗೆಟ್ ಮಾಡಿ ಹೆದರಿಸುವ ಪ್ರಯತ್ನ ನಡೆಯುತ್ತಿದೆ. ಅದಕ್ಕಾಗಿ ನ್ಯಾಯಾಲಯದ ಮೊರೆ ಹೋಗುವ ಅನಿವಾರ್ಯತೆ ಎದುರಾಯಿತು. ರಾಜಕೀಯ ಜೀವನದ ಹೊರತಾಗಿ ನಮಗೂ ವೈಯಕ್ತಿಕ ಜೀವನವಿದೆ. ನಮಗೂ ಕುಟುಂಬ, ಮಕ್ಕಳಿದ್ದಾರೆ. ಯಾವ ವ್ಯಕ್ತಿಯ ವೈಯಕ್ತಿಕ ತೇಜೋವಧೆ, ಗೌರವ ಹಾಳುಮಾಡುವ ಕೆಲಸ ಒಳ್ಳೆಯ ಬೆಳವಣಿಗೆಯಲ್ಲ ಎಂದು ಸಚಿವ ಶಿವರಾಂ ಹೆಬ್ಬಾರ್ ಬೇಸರ ವ್ಯಕ್ತಪಡಿಸಿದರು.
Key words: tolerate- defeat-not tolerate –personal- Minister- Shivaram Hebbar.