ಬೆಂಗಳೂರು, ನವೆಂಬರ್ 16, 2020 (www.justkannada.in): ರಾಜ್ಯಾದ್ಯಂತ ನಾಳೆಯಿಂದ ಕಾಲೇಜುಗಳು ಪ್ರಾರಂಭವಾಗಲಿವೆ.
ಬರೋಬ್ಬರಿ ಎಂಟು ತಿಂಗಳ ಬಳಿಕ ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಕಾಲೇಜುಗಳು ಪ್ರಾರಂಭವಾಗಲಿವೆ.
ಕಾಲೇಜ್ ಪ್ರಾರಂಭಕ್ಕೂ 3 ದಿನ ಮೊದಲು ಕೋವಿಡ್ ಟೆಸ್ಟ್ ಕಡ್ಡಾಯ ಮಾಡಲಾಗಿದೆ. ಕೋವಿಡ್ ವರದಿ ನೆಗೆಟಿವ್ ಇದ್ದರಷ್ಟೇ ತರಗತಿಗಳಿಗೆ ಪ್ರವೇಶ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗೂ ಕೊರೊನಾ ಟೆಸ್ಟ್ ಕಡ್ಡಾಯ ಮಾಡಲಾಗಿದೆ.
ವಿದ್ಯಾರ್ಥಿಗಳಿಗೆ ಕಾಲೇಜ್ ಗೆ ಕಡ್ಡಾಯವಾಗಿ ಬರುವಂತೆ ಒತ್ತಡ ಹೇರುವ ಹಾಗಿಲ್ಲ. ವಿದ್ಯಾರ್ಥಿಗಳ ಹಾಜರಿಗೆ ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿದೆ. ಪ್ರವೇಶ, ನಿರ್ಗಮನ ದ್ವಾರಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ ಮಾಡಲಾಗಿದೆ.
ತರಗತಿಗಳ ಪ್ರಾರಂಭಕ್ಕೂ ಸೂಕ್ತ ಮುಂಜಾಗ್ರತಾ ತೆಗೆದುಕೊಳ್ಳುವಂತೆ ಕಾಲೇಜುಗಳಿಗೆ ಸರ್ಕಾರ ಸೂಚನೆ ನೀಡಿದೆ.