ಬೆಂಗಳೂರು,ಸೆಪ್ಟಂಬರ್,27,2020(www.justkannada.in): ಭೂಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ನಾಳೆ ವಿವಿಧ ರೈತಪರ ಸಂಘಟನೆಗಳು ಕರ್ನಾಟಕ ಬಂದ್ ಕರೆ ನೀಡಲಾಗಿದ್ದು ಈ ಹಿನ್ನೆಲೆ ನಾಳೆ ರಾಜ್ಯ ರಾಜಧಾನಿ ಬೆಂಗಳೂರಿನ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.
ಇಬ್ಬರು ಹೆಚ್ಚುವರಿ ಆಯುಕ್ತರು, 10 ಡಿಸಿಪಿಗಳು,60 ಎಸಿಪಿಗಳು, 140 ಇನ್ಸ್ ಪೆಕ್ಟರ್ಸ್, 300 ಮಂದಿ ಪಿಎಸ್ ಐಗಳು, 1500ಕ್ಕೂ ಹೆಚ್ಚು ಸಿವಿಲ್, ಸಂಚಾರಿ ಪೊಲೀಸರು, 2000 ಕ್ಕೂ ಹೆಚ್ಚು ಕೆಎಸ್ ಆರ್ ಪಿ, ಡಿಎಆರ್ ಪೊಲೀಸ್ ಸಿಬ್ಬಂದಿಗಳನ್ನ ಭದ್ರತೆಗಾಗಿ ನಿಯೋಜಿಸಲಾಗಿದೆ.
ನಾಳೆ ರೈತರು ಬೃಹತ್ ಪ್ರತಿಭಟನೆ ನಡೆಸಲಿದ್ದು, ನಗರದ ತುಮಕೂರು ರಸ್ತೆ, ಮಾಗಡಿ ರಸ್ತೆ, ಮೈಸೂರು ರಸ್ತೆ, ಹೊಸೂರು ರಸ್ತೆ ಸೇರಿ ಪ್ರಮುಖ ಭಾಗಗಳಲ್ಲಿ ಪೊಲೀಸರು ಆಲರ್ಟ್ ಆಗಿರಲಿದ್ದಾರೆ.
Key words: Tomorrow -Karnataka Bandh-Tight security – Bangalore