ಬೆಂಗಳೂರು,ಜ,7,2020(www.justkannada.in): ಕೇಂದ್ರದ ನೀತಿಯನ್ನ ವಿರೋಧಿಸಿ ನಾಳೆ ಕಾರ್ಮಿಕ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿದ್ದು ರಾಜ್ಯದಲ್ಲಿ ಹಲವು ಸಂಘಟನೆಗಳು ಬೆಂಬಲ ನೀಡಿದೆ. ಈ ನಡುವೆ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಬಳಿ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ನಾಳೆ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ. ಶಾಲಾ ಮಕ್ಕಳ ಸುರಕ್ಷತೆ ವಿಚಾರದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಎಲ್ಲಾ ಶಾಲಾ ಕಾಲೇಜುಗಳಿಗೆ ಸೂಕ್ತಭದ್ರತೆ ವಹಿಸಲು ಸೂಚನೆ ನೀಡಲಾಗಿದೆ. ಎಲ್ಲಾ ಜಿಲ್ಲೆಗಳ ಎಸ್ ಪಿ, ಡಿಸಿ, ಸಿಇಒಗಳಿಗೆ ಸೂಚನೆ ನೀಡಲಾಗಿದೆ. ಪರೀಕ್ಷಾ ಸಮಯ ಹತ್ತಿರ ಹಿನ್ನೆಲೆ ರಜೆ ನೀಡುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ.
ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ನಾಳೆ ಕಾರ್ಮಿಕ ಸಂಘಟನೆಗಳು ಮುಷ್ಕರ ಹೂಡಿದೆ. ಹೀಗಾಗಿ ನಾಳೆ ಎಸ್ ಬಿಐ ಹೊರತುಪಡಿಸಿ ಬ್ಯಾಂಕ್ ವಹಿವಾಟು ಸ್ಥಗಿತಗೊಳ್ಳಲಿದ್ದು ಕೆಎಸ್ ಆರ್ ಟಿಸಿ ಬಿಎಂಟಿಸಿ ಬಸ್ ಸಂಚಾರ ಎಂದಿನಂತೆ ಇರುತ್ತದೆ.
Key words: tomorrow-labor- strike- school –colleges-leave-Education minister-Suresh Kumar