ಕೇಪ್ ಟೌನ್,ಜನವರಿ,4,2024(www.justkannada.in): ದಕ್ಷಿಣ ಆಫ್ರಿಕಾ ವಿರುದ್ದದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿ ಸರಣಿ ಸಮಬಲ ಮಾಡಿಕೊಂಡಿದೆ.
ಕೇಪ್ ಟೌನ್ ನಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವಿಗೆ 79 ರನ್ ಬೇಕಾಗಿತ್ತು. ಈ ವೇಳೆ 3 ವಿಕೆಟ್ ನಷ್ಟಕ್ಕೆ 80 ರನ್ ಬಾರಿಸುವ ಮೂಲಕ 7 ವಿಕೆಟ್ ಗಳ ಜಯ ಸಾಧಿಸಿದೆ.
ನಿನ್ನೆ ಆರಂಭವಾದ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ದುಕೊಂಡು ಕಣಕ್ಕಿಳಿಯಿತು. ಮೊದಲ ಇನ್ನಿಂಗ್ಸ್ ನಲ್ಲಿ ಭಾರತದ ವೇಗಿ ಮೊಹಮ್ಮದ್ ಸಿರಾಜ್ ದಾಳಿಗೆ ನಲುಗಿದ ಸೌತ್ ಆಫ್ರಿಕಾ ಕೇವಲ 55 ರನ್ ಗಳಿಗೆ ಆಲ್ ಔಟ್ ಆಯಿತು. ಸಿರಾಜ್ 6 ವಿಕೆಟ್ ಕಿತ್ತು ಮಿಂಚಿದರು.
ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ಭಾರತ 153 ರನ್ ಗಳಿಗೆ ಆಲ್ ಔಟ್ ಆಗುವ ಮೂಲಕ 98 ರನ್ ಗಳ ಮುನ್ನಡೆ ಸಾಧಿಸಿತು.
ನಂತರ 2ನೇ ಇನ್ನಿಂಗ್ಸ್ ಆರಂಭಿಸಿದ ದಕ್ಷಿಣ ಆಫ್ರಿಕಾ ಭಾರತದ ಮತ್ತೊಬ್ಬ ವೇಗಿ ಜಸ್ಪ್ರಿತ್ ಬೂಮ್ರಾ ದಾಳಿಗೆ ಸಿಲುಕಿ 176 ರನ್ ಗಳಿಗೆ ಆಲ್ ಔಟ್ ಆಯಿತು. ಆಡಂ ಮಾಕ್ರಮ್ ಶತಕ ಸಿಡಿಸಿ ಸಂಭ್ರಮಿಸಿದರು. ಈ ಮೂಲಕ ಭಾರತಕ್ಕೆ ಗೆಲ್ಲಲು 79 ರನ್ ಗುರಿ ನೀಡಿತು.
ಗುರಿ ಬೆನ್ನತ್ತಿದ ಟೀಂ ಇಂಡಿಯಾ 3 ವಿಕೆಟ್ ಕಳೆದುಕೊಂಡು 80 ರನ್ ಬಾರಿಸಿ ಜಯ ಸಾಧಿಸಿತು. ಮೊದಲ ಟೆಸ್ಟ್ ಪಂದ್ಯದಲ್ಲಿ ದಕ್ಷಿಣಾ ಆಫ್ರಿಕಾ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವಿನ ಮೂಲಕ ಸರಣಿ ಸಮಬಲವಾಯಿತು.
Key words: 2nd Test- Big win – India –against- South Africa.