Home Crime ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಜಾಮೀನು ಮಂಜೂರು.

ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಜಾಮೀನು ಮಂಜೂರು.

ಬೆಂಗಳೂರು,ಮೇ,20,2024 (www.justkannada.in):  ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ,ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣಗೆ ಜಾಮೀನು ಮಂಜೂರು ಮಾಡಿ 42ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ ರೇವಣ್ಣ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆಯನ್ನ ಇಂದಿಗೆ ಮುಂದೂಡಿಕೆ ಮಾಡಲಾಗಿತ್ತು. ಇದೀಗ ಇಂದು ಹೆಚ್.ಡಿ ರೇವಣ್ಣಗೆ 42ನೇ ಎಸಿಎಂಎಂ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, 5 ಲಕ್ಷ ಮೌಲ್ಯದ ಬಾಂಡ್ ಒಬ್ಬರ ಶ್ಯೂರಿಟಿ ನೀಡಲು ಆದೇಶ  ಹೊರಡಿಸಿದೆ.

ಸಂತ್ರಸ್ತ ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಹೆಚ್.ಡಿ ರೇವಣ್ಣಗೆ ಇತ್ತೀಚೆಗೆ  ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ನೀಡಿತ್ತು. ಹೆಚ್.ಡಿ ರೇವಣ್ಣ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದರು.

Key words: Bail, granted, former minister, HD Revanna