ಬೆನ್ನು ತಟ್ಟಿಕೊಳ್ಳುವುದನ್ನು ಬಿಟ್ಟು ಅಭಿವೃದ್ಧಿ ಕಡೆ ಗಮನ ಕೊಡಿ-ಕೈ ಸರ್ಕಾರದ ವಿರುದ್ದ ಬಿವೈ ವಿಜಯೇಂದ್ರ ಕಿಡಿ.

ಬೆಂಗಳೂರು,ಮೇ, 20,2024 (www.justkannada.in): ರಾಜ್ಯದಲ್ಲಿ ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜನರು ಹಲವು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದರು. ಆದರೆ ಆ ನಿರೀಕ್ಷೆಗಳು ಹುಸಿಯಾಗಿವೆ. ಇನ್ನು ಮುಂದಾದರೂ ಬೆನ್ನು ತಟ್ಟಿಕೊಳ್ಳುವುದನ್ನು ಬಿಟ್ಟು ಅಭಿವೃದ್ಧಿ ಕಡೆ ಗಮನ ಕೊಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದರು.

ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಅವರು ಆಡಳಿತಾರೂಢ ಕಾಂಗ್ರೆಸ್‌‍ ಸರ್ಕಾರ ಒಂದು ವರ್ಷದ ಅವಧಿಯಲ್ಲಿನ ವೈಫಲ್ಯಗಳ ಚಾರ್ಜ್‌ಶೀಟ್‌ ಬಿಡುಗಡೆ ಮಾಡಿದರು.

ಬಳಿಕ ಮಾತಾನಾಡಿದ ಬಿವೈ ವಿಜಯೇಂದ್ರ, ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಾಗಿದೆ.  ಹುಬ್ಬಳ್ಳಿಯ ನೇಹಾ, ಅಂಜಲಿ, ಕೊಡಗಿನಲ್ಲಿ ವಿದ್ಯಾರ್ಥಿನಿ ಮೀನಾ ಕೊಲೆ, ಕಲಬುರಗಿಯಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ ದಬ್ಬಾಳಿಕೆ ಹೆಚ್ಚಾಗಿದೆ,  ಇದರಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ ಹರಾಜಾಗುತ್ತಿದೆ, ಲವ್‌ ಜಿಹಾದ್‌ ನಂತಹ ವೇಳೆ ಸರ್ಕಾರದ ಹೇಳಿಕೆ ಕೊಲೆಗಡುಕರಿಗೆ ಶಕ್ತಿ ನೀಡಿದಂತಾಗಿದೆ ಎಂದು ಹರಿಹಾಯ್ದರು.

ನಂತರ ಮಾತನಾಡಿದ ವಿಪಕ್ಷ ನಾಯಕ ಆರ್‌.ಅಶೋಕ್‌, ಕಾಂಗ್ರೆಸ್‌  ಸರ್ಕಾರಕ್ಕೆ ವರ್ಷ, ಆದರೆ ಸಮಸ್ಯೆಗಳು ನೂರೊಂದು. ವರ್ಷಕ್ಕೆ ಲೂಟಿ ಎಷ್ಟು ಎಂದು ಜನ ಲೆಕ್ಕ ಹಾಕುತ್ತಿದ್ದಾರೆ, ನೇಹಾ,ಮೀನ, ಅಂಜಲಿ ಆಯ್ತು ಮುಂದೆ ಯಾರು ಎನ್ನುವ ಸ್ಥಿತಿ ಇದೆ, ಕಾಲೇಜಿಗೆ ಹೋದರೆ ಗ್ಯಾರಂಟಿ ಇಲ್ಲ, ಮನೆಯಿಂದ ಹೊರ ಬಂದರೆ ಗ್ಯಾರಂಟಿ ಇಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ವಾಗ್ದಾಳಿ ನಡೆಸಿದರು.

Key words: bjp, BY Vijayendra, congress, government