ನವದೆಹಲಿ,ಡಿಸೆಂಬರ್,7,2021(www.justkannada.in) ಮೂರು ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಬಳಿಕವೂ ರೈತರು ನಡೆಸುತ್ತಿದ್ದ ಹೋರಾಟವನ್ನ ನಾಳೆ ಅಂತ್ಯಗೊಳಿಸುವ ಸಾಧ್ಯತೆ ಇದೆ. ಹೌದು, ಕನಿಷ್ಠ ಬೆಂಬಲ ಬೆಲೆ ಖಾತರಿ ಸೇರಿದಂತೆ ಪ್ರತಿಭಟನಾ ನಿರತ ರೈತರ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಲಿಖಿತವಾಗಿ ಒಪ್ಪಿಗೆ ನೀಡಿದ್ದು ಈ ಹಿನ್ನೆಲೆಯಲ್ಲಿ ನಾಳೆ ಹೋರಾಟ ಅಂತ್ಯವಾಗುವ ಸಾಧ್ಯತೆ ಇದೆ.
ರೈತ ಸಂಘಗಳಿಗೆ ಬರೆದ ಪತ್ರದಲ್ಲಿ ಸರ್ಕಾರವು ಎಂಎಸ್ಪಿ ಕುರಿತು ಸಮಿತಿಯನ್ನು ರಚಿಸುವುದಾಗಿ ಹೇಳಿದೆ. ಬೆಳೆ ತ್ಯಾಜ್ಯ ಸುಡುವಿಕೆ ಸೇರಿದಂತೆ ರೈತರ ಮೇಲಿನ ಪ್ರಕರಣಗಳನ್ನು ಕೈಬಿಡಲು ಕೇಂದ್ರ ಸರ್ಕಾರ ಒಪ್ಪಿದೆ ಎನ್ನಲಾಗಿದೆ. ಈ ಪ್ರಸ್ತಾಪವನ್ನು ಒಪ್ಪಿಕೊಂಡರೆ, ರೈತರು ಒಂದು ವರ್ಷಕ್ಕೂ ಹೆಚ್ಚು ಕಾಲ ದೇಶದಾದ್ಯಂತ ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವ ಸಾಧ್ಯತೆ ಇದೆ.
ನಾಳೆ 2 ಗಂಟೆಗೆ ರೈತಮುಖಂಡರು ಸಭೆ ನಡೆಸಲಿದ್ದು ಹೋರಾಟ ಹಿಂಪಡೆಯುವ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾದ್ಯತೆ ಇದೆ. ಈ ಬಗ್ಗೆ ಮಾತನಾಡಿರುವ ರೈತಮುಖಂಡ ರಾಕೇಶ್ ಟಿಕಾಯತ್, ರೈತರ ಮೇಲಿನ ಕೇಸ್ ವಾಪಸ್ ಪಡೆಯಿರಿ. ಲಿಖಿತ ಭರವಸೆಯನ್ನ ನೀಡಿದರೇ ಒಪ್ಪುವುದಿಲ್ಲ. ಮೊದಲು ರೈತರ ಬೇಡಿಕೆಗಳನ್ನ ಈಡೇರಿಸಿ ಎಂದಿದ್ದಾರೆ.
Key words: central government – agreed – fulfill – demand – farmers-Decision – withdrawal – fight