ಡಿ.ಕೆ ಶಿವಕುಮಾರ್ ವಿರುದ್ಧ ಚಾರ್ಜ್ ಶೀಟ್: ಬಿಜೆಪಿ ವಿರುದ್ಧ ಬಿ.ಕೆ ಹರಿಪ್ರಸಾದ್ ಆಕ್ರೋಶ.

 

ನವದೆಹಲಿ,ಮೇ,26,2022(www.justkannada.in): ಅಕ್ರಮ ಹಣ ವರ್ಗಾವನೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಇಡಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ.

ಈ ಕುರಿತು ನವದೆಹಲಿಯಲ್ಲಿ ಮಾತನಾಡಿರುವ ಬಿ.ಕೆ ಹರಿಪ್ರಸಾದ್, ಚುನಾವಣೆ ಹೊತ್ತಿನಲ್ಲಿ ಡಿಕೆ ಶಿವಕುಮಾರ್ ಅವರನ್ನ ಟಾರ್ಗೆಟ್ ಮಾಡಿದೆ. ವಿರೋಧ ಪಕ್ಷದ ನಾಯಕರನ್ನ ಟಾರ್ಗೆಟ್ ಮಾಡಲಾಗುತ್ತಿದೆ.  ಡಿಕೆಶಿ ಕೇಸ್ ನಲ್ಲಿ 2 ವರ್ಷದ ಬಳಿಕ ಚಾರ್ಜ್ ಶೀಟ್ ಹಾಕಿದ್ದಾರೆ.  ಈ ಮೂಲಕ ಕಾಂಗ್ರೆಸ್ ನಾಯಕರ ಆತ್ಮವಿಶ್ವಾಸ ಕುಗ್ಗಿಸಲು ಯತ್ನಿಸಲಾಗುತ್ತಿದೆ.  ಬಿಜೆಪಿ ಸರ್ಕಾರದ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಆದರೆ ಸರ್ಕಾರ ಅವರನ್ನ ತನಿಖೆಗೊಳಪಡಿಸಿಲ್ಲ ಕನಿಷ್ಠ ಪಕ್ಷ ಮಾಹಿತಿಯನ್ನ ಪಡೆದಿಲ್ಲ. ಆದರೆ ಕಾಂಗ್ರೆಸ್ ನಾಯಕರನ್ನ ಉದ್ದೇಶಪೂರ್ವಕವಾಗಿ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಹರಿಹಾಯ್ದರು.

ಪಠ್ಯಪುಸ್ತಕ ಪರಿಷ್ಕರಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಬಿ.ಕೆ ಹರಿಪ್ರಸಾದ್, ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನ ಅವಮಾನ ಮಾಡಲಾಗುತ್ತಿದೆ. ಸಂವಿಧಾನ ಪರ ಮಾತನಾಡುವವರನ್ನ ಅವಹೇಳನ ಮಾಡುತ್ತಿದೆ.  ಅವಹೇಳನ ಮಾಡುವುದು ಬಿಜೆಪಿಗೆ ಹವ್ಯಾಸವಾಗಿದೆ. ಕುವೆಂಪು ಬಗ್ಗೆ ರೋಹಿತ್ ಚರ್ಕತೀರ್ಥ ಅಪಮಾನ ಮಾಡಿದ್ದಾರೆ.  ಕರ್ನಾಟಕದಲ್ಲಿ ಇರಲು ರೋಹಿತ್ ಚಕ್ರತೀರ್ಥ ಲಾಯಕ್ಕಿಲ್ಲ. ಇಂತಹ ಬೆಳವಣಿಗೆಯನ್ನ ಸಭ್ಯ ನಾಗರೀಕ ವರ್ಗ ಖಂಡಿಸಬೇಕು ಎಂದರು.

Key words: Charge sheet- against-DK Shivakumar-BK Hariprasad -against -BJP.