ಬೆಂಗಳೂರು,ಜನವರಿ,18,2022(www.justkannada.in): ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ್ ಕಂಬಾರ ಅವರ ಪತ್ನಿ ಸತ್ಯಭಾಮ ಚಂದ್ರಶೇಖರ್ ಕಂಬಾರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸತ್ಯಭಾಮ ಅವರು ಚಂದ್ರಶೇಖರ ಕಂಬಾರ ಅವರ ಪ್ರೇರಣಾ ಶಕ್ತಿಯಾಗಿದ್ದರು. ಅವರಿಗೆ ಅಪಾರವಾದ ಓದಿನ ಹವ್ಯಾಸವಿತ್ತು. ಹೀಗಾಗಿ ಅವರು ಸಾಹಿತ್ಯ ಕ್ಷೇತ್ರದಲ್ಲಿನ ಬೆಳವಣಿಗೆ ಕುರಿತು ಆಸಕ್ತಿ ಹೊಂದಿದ್ದರು. ಸತ್ಯಭಾಮ ಅವರ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕಂಬಾರ ಕುಟುಂಬದ ಸದಸ್ಯರಿಗೆ ನೀಡಲಿ ಎಂದು ಕೋರುತ್ತೇನೆ ಎಂದು ಸಿಎಂ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.
ಸತ್ಯಭಾಮ ಚಂದ್ರಶೇಖರ ಕಂಬಾರ ಅವರ ನಿಧನಕ್ಕೆ ಹೆಚ್. ಡಿಕೆ ಸಂತಾಪ.
ಸತ್ಯಭಾಮ ಚಂದ್ರಶೇಖರ ಕಂಬಾರ ಅವರ ನಿಧನಕ್ಕೆ ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಹೆಚ್.ಡಿ ಕುಮಾರಸ್ವಾಮಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿಗಳಾದ ಡಾ. ಚಂದ್ರಶೇಖರ ಕಂಬಾರ ಅವರ ಧರ್ಮಪತ್ನಿ ಸತ್ಯಭಾಮ ಚಂದ್ರಶೇಖರ ಕಂಬಾರ ಅವರ ನಿಧನ ತೀವ್ರ ದುಃಖ ಉಂಟು ಮಾಡಿದೆ.
ಸತ್ಯಭಾಮಾ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕಂಬಾರರು, ಮತ್ತವರ ಕುಟುಂಬದ ಸದಸ್ಯರಿಗೆ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಕರ್ನಾಟಕ ಗಡಿಪ್ರದೇಶ ಅಭಿವೃಧ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ್ ಸಹ ಕಂಬನಿ ಮಿಡಿದಿದ್ದು, ಅತ್ಯಂತ ಪ್ರೀತಿಯಿಂದ ಕಾಣುತ್ತಿದ್ದ, ಮನೆಗೆ ಹೋದವರಿಗೆಲ್ಲ ಆತಿಥ್ಯ ಮಾಡುತ್ತಿದ್ದ ಒಬ್ಬ ಹಿರಿಯ ಅಕ್ಕಂನಂತೆ ಇದ್ದ ಡಾ ಚಂದ್ರಶೇಖರ ಕಂಬಾರರ ಯಶಸ್ಸಿನ ಸ್ಫೂರ್ತಿ ದೇವತೆ ಸತ್ಯಭಾಮ ಅವರ ನಿಧನ ತುಂಬಲಾರದ ನೋವು ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದೂ ಭಗವಂತ ನಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
Key words: CM Bommai – condolences-Satyabhama Chandrasekhar Kambara’s- death.