ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಕ್ರಿಶ್ಚಿಯನ್ ಸಮುದಾಯದ ಕೊಡುಗೆ ಅತ್ಯುತ್ತಮ: ಸಿಎಂ ಸಿದ್ದರಾಮಯ್ಯ ಶ್ಲಾಘನೆ.

ಬೆಂಗಳೂರು,ಡಿಸೆಂಬರ್ 18,2023(www.justkannada.in): ಸಾಮಾಜಿಕ ಅಸಮಾನತೆಯಿರುವ ಕಾಲಮಾನದಲ್ಲಿ ಕ್ರಿಶ್ಚಿಯನ್ ಸಮುದಾಯ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿನ ಸೇವೆ ಶ್ಲಾಘನೀಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಲೀನಿಯರ್ ಆಕ್ಸರಲೇಟರ್ ರೆಡಿಯಷನ್ ಥೆರಪಿ ಸೇವೆಯನ್ನು  ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಕ್ರಿಶ್ಚಿಯನ್ ಸಮುದಾಯ ಅತ್ಯುತ್ತಮ ಕೆಲಸವನ್ನು ಮಾಡಿದೆ. ಉಡುಪಿ ಹಾಗೂ ಮಂಗಳೂರಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಈ ಸಮುದಾಯ ಒಳ್ಳೆಯ ಬುನಾದಿಯನ್ನು ಹಾಕಿದೆ. ಭಾರತೀಯ ಸಮಾಜದಲ್ಲಿ ಬಹುಸಂಖ್ಯಾತ ಜನ ಅಕ್ಷರಸಂಸ್ಕೃತಿಯಿಂದ ವಂಚಿತರಾಗಿದ್ದರು ಎಂದರು.

ಆಸ್ಪತ್ರೆಯಲ್ಲಿ ಆಧುನಿಕ ಚಿಕಿತ್ಸಾ ಸೌಲಭ್ಯ ..

ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಕಾಯಿಲೆ ಗುಣಪಡಿಸುವ ಆಧುನಿಕ ಚಿಕಿತ್ಸಾ ವಿಧಾನವಾದ ಲೀನಿಯರ್ ಆಕ್ಸರಲೇಟರ್ ರೆಡಿಯಷನ್ ಥೆರಪಿ ಸೇವೆಯನ್ನು ಇಂದು ಉದ್ಘಾಟಿಸಲಾಗಿದೆ.  ಪ್ರಥಮ ಹಂತದಲ್ಲಿ ಕ್ಯಾನ್ಸರ್ ರೋಗವನ್ನು ಪತ್ತೆ ಹಚ್ಚಿದರೆ, ರೋಗವನ್ನು ಗುಣಪಡಿಸಬಹುದು. ಕಡೆಯ ಹಂತದಲ್ಲಿ ಕ್ಯಾನ್ಸರ್ ಪತ್ತೆಯಾದಾಗ, ಕಾಯಿಲೆ ಉಲ್ಬಣಗೊಳ್ಳದಿರಲು ಈ ಅತ್ಯಾಧುನಿಕ ಚಿಕಿತ್ಸೆ ಸಹಕಾರಿಯಾಗಿದೆ. ಈ  ಆಸ್ಪತ್ರೆಗೆ ಹಳ್ಳಿಗಾಡಿನ ಜನರು ಹೆಚ್ಚು ಬರುವುದರಿಂದ ಇಲ್ಲಿನ ವೈದ್ಯರು ಕನ್ನಡದಲ್ಲಿ ಮಾತನಾಡುವುದರಿಂದ ರೋಗಿಗಳಿಗೆ ಹೆಚ್ಚು ಅನುಕೂಲವಾಗುತ್ತದೆ ಎಂದರು.

ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆ :

ಶ್ರೀಮಂತರು ಉತ್ತಮ ಹಾಗೂ ದುಬಾರಿ ಖಾಸಗಿ ಆಸ್ಪತ್ರೆಗೆ ಹೋಗುತ್ತಾರೆ. ಆದರೆ ದಿನನಿತ್ಯಜೀವನದಕ್ಕಾಗಿ ಹೋರಾಡುವ ಬಡಜನರಿಗೆ ಕಡಿಮೆ ದರದಲ್ಲಿ ಆರೋಗ್ಯ ಸೇವೆ ನೀಡುವ ಬ್ಯಾಪ್ಟಿಸ್ಟ್ ಆಸ್ಪತ್ರೆ ಜನಸೇವೆಯಲ್ಲಿ ನಂಬಿಕೆ ಇರಿಸಿದೆ. ಬ್ಯಾಪ್ಟಿಸ್ಟ್ ಆಸ್ಪತ್ರೆಯು ಬಡವರಿಗೆ ಕೈಗೆಟಕುವ  ದರದಲ್ಲಿ ಚಿಕಿತ್ಸೆ ನೀಡುತ್ತಾ ಬಂದಿದೆ. ಸರ್ಕಾರಿ ಆಸ್ಪತ್ರೆಯಂತೆ ಬ್ಯಾಪ್ಟಿಸ್ಟ್ ಆಸ್ಪತ್ರೆ ಬಡರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುತ್ತಿದ್ದು, ಸರ್ಕಾರ ಈ ಆಸ್ಪತ್ರೆಗೆ ಎಲ್ಲ ರೀತಿಯ ಸಹಕಾರವನ್ನು ನೀಡಲಿದೆ ಎಂದರು.

ENGLISH SUMMARY…

Chief Minister Siddaramaiah appreciates Contribution of Christian community in education and health

Bengaluru, December 18: Chief Minister Siddaramaiah said that the Christian community’s service in the the era of social inequality. field of education and health is commendable.

He was speaking after inaugurating the Linear Accelerator Radiation Therapy Service at Baptist Hospital, today.

The Christian community has done excellent work in the field of education and health. This community has laid a good foundation for quality education in Udupi and Mangalore. Majority of people in Indian society were deprived of literacy, he said.

Modern treatment facilities in the hospital:

The linear oscillator radiation therapy service, a state-of-the-art treatment method for cancer treatment, has been inaugurated today at Baptist Hospital. If cancer is detected in the early stages, the patient can be cured. When the cancer is detected at a later stage, this advanced treatment helps prevent the disease from progressing. He said that since more rural people come to this hospital, it will be more convenient for the patients if the doctors here speak in Kannada, he said.

Affordable Healthcare:

Rich people visit good and expensive private hospitals. But Baptist Hospital, which provides health services at low rates to poor people who struggle for daily life, believes in public service. Baptist Hospital has been providing treatment to poor people at affordable rates. He said that like a government hospital, Baptist Hospital is providing quality treatment to poor patients and the government will provide all kinds of cooperation to this hospital, the CM said.

Key words: CM- Siddaramaiah –appreciates-Contribution – Christian community – education-health