ಬೆಂಗಳೂರು, ಫೆಬ್ರವರಿ,14,2024(www.justkannada.in): ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿದ್ದ ಆದೇಶವನ್ನ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಕೆಎಸ್ ಈಶ್ವರಪ್ಪ ಅವರ ರಾಜಿನಾಮೆ ಆಗ್ರಹಿಸಿ 2022ರ ಏಪ್ರಿಲ್ 14 ರಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಸಿದ್ದರಾಮಯ್ಯ, ಸಚಿವ ಎಂಬಿ ಪಾಟೀಲ್ ಸೇರಿದಂತೆ ಕಾಂಗ್ರೆಸ್ ನ ನಾಯಕರು ಬೃಹತ್ ಪ್ರತಿಭಟನೆ ನಡೆಸಿದ್ದರು. ಈ ವೇಳೆ ರಸ್ತೆ ತಡೆಯಾಗಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಾಹನ ಸಾವರರು ಪರದಾಡುವಂತಾಗಿತ್ತು. ಈ ಸಂಬಂಧ ಪ್ರಕರಣ ದಾಖಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕೆಲವು ನಾಯಕರಿಗೆ ದಂಡ ವಿಧಿಸಿ ಮಾರ್ಚ್ 6 ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿತ್ತು.
ಈ ಆದೇಶವನ್ನ ಪ್ರಶ್ನಿಸಿ ಇದೀಗ ಸಿಎಂ ಸಿದ್ದರಾಮಯ್ಯ ಸುಪ್ರೀಂಕೋರ್ಟ್ ಗೆ ಮೆಟ್ಟಿಲೇರಿದ್ದು ನಮ್ಮ ಪ್ರತಿಭಟನೆ ಕಾನೂನು ಬದ್ಧವಾಗಿತ್ತು ಎಂದು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
Key words: CM Siddaramaiah -challenged -High Court -order – moved – Supreme Court.