ಬೆಂಗಳೂರು, ಅಕ್ಟೋಬರ್, 9,2024 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಜಟಾಪಟಿ ನಡುವೆ ಸಿಎಂ ಸಿದ್ದರಾಮಯ್ಯ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ರನ್ನು ಭೇಟಿ ಮಾಡಿದ್ದಾರೆ.
ಬೆಂಗಳೂರಿಗೆ ಮಾಲ್ಡೀವ್ಸ್ ಅಧ್ಯಕ್ಷರ ಭೇಟಿ ಹಿನ್ನೆಲೆಯಲ್ಲಿ ರಾಜಭವನದಲ್ಲಿ ಔತಣಕೂಟ ಆಯೋಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯಪಾಲರ ಆಹ್ವಾನ ಮೇರೆಗೆ ರಾಜಭವನಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಭೇಟಿಯಾಗಿ ನಗುಮುಖದಿಂದಲೇ ಕೈಕುಲುಕಿ ಕುಶಲೋಪರಿ ವಿಚಾರಿಸಿದರು.
ರಾಜ್ಯ ರಾಜಕೀಯದಲ್ಲಿ ಮುಡಾ ಹಗರಣ ಸಾಕಷ್ಟು ಸದ್ದು ಮಾಡಿದ್ದು, ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ಆದೇಶಿಸಿದ್ದರು. ಈ ಬೆನ್ನಲ್ಲೆ ಇದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್ ಕೂಡ ರಾಜ್ಯಪಾಲರ ನಿರ್ಧಾರವನ್ನು ಎತ್ತಿ ಹಿಡಿದಿತ್ತು.
Key words: CM Siddaramaiah, met, Governor, Bangalore