ಮೈಸೂರು,ಆ,6,2019(www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಶಿಬಿರ ಆಯೋಜಿಸಿದೆ.
ಕೆಎಸ್ ಒಯುನ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ತರಬೇತಿ ಶಿಬಿರವನ್ನ ರಾಜವಂಶಸ್ಥ ಯದುವೀರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ವೇಳೆ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ದಲ್ಲಿ ಕುಲಪತಿ ಡಾ ವಿದ್ಯಾಶಂಕರ್ ಇನ್ನಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮ ಉದ್ಘಾಟಿಸಿ ಬಳಿಕ ಮಾತನಾಡಿದ ಯದುವೀರ್ ಅವರು, ಈ ರೀತಿಯ ಶಿಬಿರಗಳಿಂದ ನಮ್ಮ ವಿದ್ಯಾರ್ಥಿ ಜೀವನದಲ್ಲಿ ಉಪಯೋಗ ಆಗುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳುವಾಗ ಇಂತಹ ಶಿಬಿರಗಳು ಸಹಕಾರಿಯಾಗಲಿವೆ.ಸ್ಪರ್ಧಾತ್ಮಕ ಪರೀಕ್ಷಾ ಶಿಬಿರ ಆಯೋಜನೆ ಮೂಲಕ ಮುಕ್ತ ವಿಶ್ವವಿದ್ಯಾನಿಲಯ ಉತ್ತಮ ಕಾರ್ಯ ಮಾಡುತ್ತಿದೆ ಎಂದು ಶ್ಲಾಘಿಸಿದರು.
Key words: Competitive –exam-Training Camp – KSOU- innuagrate- Yadaveer.