ಬೆಂಗಳೂರು, ಡಿಸೆಂಬರ್ 19,2023(www.justkannada.in): ರಾಜ್ಯದಲ್ಲಿ ಕೊರೋನಾ ಭೀತಿ ಶುರುವಾದ ಹಿನ್ನೆಲೆ ರಾಜ್ಯ ಸರ್ಕಾರ ಕೋವಿಡ್ ಮಾರ್ಗಸೂಚಿಯನ್ನ ಬಿಡುಗಡೆ ಮಾಡಿದೆ.
ಆರೋಗ್ಯ ಇಲಾಖೆ ಮಾರ್ಗಸೂಚಿಯನ್ನ ಬಿಡುಗಡೆ ಮಾಡಿದ್ದು, ಕೇರಳ ಹಾಗೂ ತಮಿಳುನಾಡು ರಾಜ್ಯಗಳ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ ಮಾಡುವುದು. ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಿ ವರದಿಯನ್ನು ಇಲಾಖೆಗೆ ಸಲ್ಲಿಸಲು ಸೂಚನೆ ನೀಡಲಾಗಿದೆ. ತೀವ್ರ ಶ್ವಾಸಕೋಶ ಹಾಗೂ ಉಸಿರಾಟದ ಸಮಸ್ಯೆ ಇರುವವರನ್ನು ಕೊರೋನಾ ತಪಾಸಣೆಗೆ ಒಳಪಡಿಸಲು ಸೂಚನೆ ನೀಡಲಾಗಿದೆ.
ರಾಜ್ಯ ಸರ್ಕಾರ ಬಿಡುಗಡೆ ಮಾಡುವ ಗೈಡ್ ಲೈನ್ ಗಳು ಹೀಗಿದೆ ನೋಡಿ..
ಕೇರಳ, ತಮಿಳುನಾಡು ರಾಜ್ಯಗಳ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ.
ಕೊವಿಡ್ ನಿರ್ಬಂಧ ಅವಶ್ಯಕತೆ ಇಲ್ಲ
ಗಡಿ ಜಿಲ್ಲೆಗಳಲ್ಲಿ ಅಗತ್ಯ ಸಂಖ್ಯೆಯ ಪರೀಕ್ಷೆಗಳನ್ನು ಹೆಚ್ಚಿಸಬೇಕು. ಗಡಿ ಜಿಲ್ಲೆಗಳ ಕೋವಿಡ್ ಪರೀಕ್ಷಾ ವರದಿಯನ್ನು ಆರೋಗ್ಯ ಇಲಾಖೆಗೆ ಸಲ್ಲಿಸಲು ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ.
ತೀವ್ರ ಶ್ವಾಸಕೋಶ, ಉಸಿರಾಟದ ಸಮಸ್ಯೆ ಇರುವವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಕೋವಿಡ್ ಲಕ್ಷಣ ಇರುವವರನ್ನು ಕೊವಿಡ್ ಪರಿಶೀಲನೆಗೆ ಒಳಪಡಿಸಬೇಕು
ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಕೊಠಡಿ ಸ್ಥಾಪನೆ ಮಾಡುವುದು. ಡಿಸೆಂಬರ್ 3, 4ನೇ ವಾರದಲ್ಲಿ ಮಾಕ್ ಡ್ರಿಲ್ ಮುಕ್ತಾಯಗೊಳಿಸಲು ಸೂಚನೆ ನೀಡಲಾಗಿದೆ.
ಎಲ್ಲಾ ಹಿರಿಯ ನಾಗರೀಕರು (60 ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು (ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತ.
ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಉತ್ತಮ ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಇತ್ಯಾದಿಗಳ ಪಾಲನೆಯು ಅಗತ್ಯವಾಗಿದೆ
ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ, ಮನೆಯಲ್ಲಿರುವುದು ಸೂಕ್ತ. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರೀಕರು / ದುರ್ಬಲರನ್ನು ಅವಶ್ಯವಿದ್ದಲ್ಲಿ, ಮಾತ್ರವೇ ಭೇಟಿ ಮಾಡುವುದು.
ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು, ಜನಸಂದಣಿಯ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸುವಂತೆ ಸಲಹೆ
ಅಂತರ ರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ ಧರಿಸುವುದು ಹೆಚ್ಚಿನ ಗಾಳಿ-ಬೆಳಕು ಇಲ್ಲವ ಮತ್ತು ಜನದಟ್ಟಣೆ ಇರುವ ಸ್ಥಳಗಳಿಗೆ ತೆರಳದಿರುವುದೂ ಸೇರಿದಂತೆ ಇತರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದು ಸೂಕ್ತವಾಗಿದೆ.
Key words: Corona scare- State government –releases- Covid- guide line