ಬೆಂಗಳೂರು, ಸೆಪ್ಟಂಬರ್,7,2022(www.justkannada.in): ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ವಿಚಾರಣೆಗೆ ಹೈಕೋರ್ಟ್ ಆದೇಶಿಸಿದೆ.
ಪ್ರಾಸಿಕ್ಯೂಷನ್ ಗೆ ಪೂರ್ವಾನುಮತಿ ಸಿಗದಿದ್ದಕ್ಕೆ ಕೇಸ್ ವಜಾಗೊಂಡಿತ್ತು. ವಿಚಾರಣಾ ಕೋರ್ಟ್ ವಜಾ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದ್ದು, ಪ್ರಕರಣ ಮರು ವಿಚಾರಣೆಗೆ ಆದೇಶಿಸಿದೆ.
ಬಿಎಸ್ ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಶಶಿಧರ ಮರಡಿ, ಸಂಜಯ್ಶ್ರೀ, ಚಂದ್ರಕಾಂತ ರಾಮಲಿಂಗಮ್, ವಿರುಪಾಕ್ಷಪ್ಪ ಯಮಕನಮರಡಿ, ಎಸ್.ಟಿ.ಸೋಮಶೇಖರ್, ಡಾ.ಜಿ.ಸಿ.ಪ್ರಕಾಶ್, ಕೆ.ರವಿ, ವಿರುದ್ಧ ಕೇಸ್ ದಾಖಲಾಗಿತ್ತು. ದೂರುದಾರ ಟಿ.ಜೆ.ಅಬ್ರಹಾಂ ಅರ್ಜಿ ಸಲ್ಲಿಸಿದ್ದರು. ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಪೂರ್ವಾನುಮತಿ ನಿರಾಕರಣೆ ಹಿನ್ನೆಲೆ ಇತ್ತೀಚೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಲು ನಿರಾಕರಿಸಿತ್ತು. ಹೀಗಾಗಿ ಟಿ.ಜೆ.ಅಬ್ರಹಾಂ ಹೈಕೋರ್ಟ್ ಮೆಟ್ಟಿಲೇರಿದ್ದರು.
ಅಮಿಕಸ್ ಕ್ಯೂರಿಯಾಗಿ ವೆಂಕಟೇಶ್ ಅರಬಟ್ಟಿ ವಾದಿಸಿದ್ದರು. ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ಕೋರಿ ಹೈಕೋರ್ಟ್ಗೆ ಬಿಎಸ್ವೈ ಪರ ವಕೀಲ ಸಂದೀಪ್ ಪಾಟೀಲ್ ಮನವಿ ಮಾಡಿದ್ದಾರೆ. ಕಾಲಾವಕಾಶದ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಮಾನಿಸಲಿ ಎಂದು ಬಿ.ಎಸ್.ಯಡಿಯೂರಪ್ಪ ಪರ ವಕೀಲರಿಗೆ ಹೈಕೋರ್ಟ್ ಪ್ರತಿಕ್ರಿಯೆ ನೀಡಿದೆ.
Key words: Corruption-allegation-against-former CM- BS yeddyurappa-retrial- case.