ಬೆಂಗಳೂರು,ಆಗಸ್ಟ್,12,2022(www.justkannada.in): ಶಾಲಾ ಶಿಕ್ಷಕರ ನೇಮಕಾತಿಯಲ್ಲಿ 2 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಡಿಯಲ್ಲಿ ನಡೆಸುವ ಶಿಕ್ಷಕರ ನೇಮಕ ಕಾಯಿದೆಗೆ ರಾಜ್ಯ ಸರಕಾರ ತಿದ್ದುಪಡಿ ತಂದಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಹಾಲಿ ಇರುವ ವಯೋಮಿತಿಯನ್ನು ಮತ್ತೆ ಎರಡು ವರ್ಷ ಹೆಚ್ಚಳ ಮಾಡಲಾಗಿದೆ. ಇನ್ಮುಂದೆ ಪರಿಶಿಷ್ಟ ಜಾತಿ, ವರ್ಗಕ್ಕೆ 47 ವರ್ಷ, ಹಿಂದುಳಿದ ವರ್ಗಕ್ಕೆ 45 ವರ್ಷ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 42 ವರ್ಷದವರೆಗೆ ಶಿಕ್ಷಕರ ನೇಮಕಾತಿ ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡಲಾಗಿದೆ.
ಇದರ ಜತೆಗೆ ಶಿಕ್ಷಕರ ನೇಮಕಾತಿ ಸಂದರ್ಭದಲ್ಲಿ ಅರ್ಹತಾ ಪರೀಕ್ಷೆಗೆ ನಿಗದಿಯಾಗಿದ್ದ ಶೇ.60ರಷ್ಟು ಅಂಕಗಳನ್ನು ಸಡಿಲಿಕೆ ಮಾಡಿ ಶೇ.50 ಅಂಕಕ್ಕೆ ನಿಗದಿಪಡಿಸಲಾಗಿದೆ.
Key words: Decision – age- limit – recruitment -school teachers