ಬೆಂಗಳೂರು,ನವೆಂಬರ್,2,2023(www.justkannada.in): ಚಿಕ್ಕಬಳ್ಳಾಪುರದಲ್ಲಿ ಜಿಕಾ ವೈರಸ್ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಜಿಕಾ ವೈರಸ್ ಬಗ್ಗೆ ಭಯ ಬೇಡ. ಎಚ್ಚರಿಕೆಯಿಂದ ಇರಬೇಕು ಎಂದಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಕೇರಳದಲ್ಲಿ ನಿಫಾ ವೈರಸ್ ಪತ್ತೆಯಾಗಿತ್ತು, ಜಿಕಾ ಬೇರೆ, ನಿಫಾ ಬೇರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜಿಕಾ ವೈರಸ್ ಪತ್ತೆಯಾಗಿದೆ. ಜಿಕಾ ಬಗ್ಗೆ ಭಯ ಬೇಡ, ಬಾಣಂತಿಯರು ಎಚ್ಚರಿಕೆಯಿಂದ ಇರಬೇಕು. ಸೊಳ್ಳೆಗಳಲ್ಲಿ ಜಿಕಾ ಕಾಣಿಸಿಕೊಂಡಿದ್ದು, ಮನುಷ್ಯರಿಗೆ ಹರಡಿಲ್ಲ ಎಂದರು.
ಜಿಕಾ ಪತ್ತೆ ಹಿನ್ನೆಲೆ ಆಸ್ಪತ್ರೆಯಲ್ಲಿ ಇದ್ದವರಿಗೆ ಪರೀಕ್ಷೆ ಮಾಡಲಾಗಿದೆ. ಜಿಕಾ ವೈರಸ್ ಲಕ್ಷಣ ಇದ್ದವರ ಸ್ಯಾಂಪಲ್ ಪಡೆಯಲಾಗಿದೆ. ಇನ್ನು 3 ದಿನಗಳಲ್ಲಿ ಟೆಸ್ಟ್ಗೆ ಒಳಪಟ್ಟವರ ವರದಿ ಬರುವ ಸಾಧ್ಯತೆ ಇದೆ. ಆರೋಗ್ಯ ಇಲಾಖೆಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
Key words: Don’t – afraid – Zika virus- Be careful – Health Minister -Dinesh Gundurao.