ಮೈಸೂರು,ಆಗಸ್ಟ್,7,2023(www.justkannada.in): ಈ ಬಾರಿ ಮೈಸೂರು ದಸರಾ ಆಚರಣೆಗೆ 26 ಕೋಟಿಯ ಡಿಪಿಆರ್ ಸಿದ್ದಪಡಿಸಿ ಕೊಟ್ಟಿದ್ದೇವೆ. ಈ ಭಾರಿ ವಿಶೇಷವಾಗಿ ಮಹಾನಗರ ಪಾಲಿಕೆಗೆ ನೇರವಾಗಿ ಅನುದಾನ ಬಿಡುಗಡೆ ಮಾಡಲಾಗುತ್ತಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್ ತಿಳಿಸಿದ್ದಾರೆ.
ಇಂದು ಈ ಕುರಿತು ಮಾತನಾಡಿದ ಮೇಯರ್ ಶಿವಕುಮಾರ್, ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಆಚರಣೆ ಕುರಿತು ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಹೈ ಪವರ್ ಕಮಿಟಿ ನಡೆಸಲಾಯಿತು. ಆ ಸಭೆಯಲ್ಲಿ ಅದ್ದೂರಿ ದಸರಾ ಆಚರಣೆ ಮಾಡಲು ತೀರ್ಮಾನ ಮಾಡಲಾಗಿದೆ. ದಸರಾ ಆಚರಣೆಗೆ 26ಕೋಟಿಯ ಡಿಪಿಆರ್ ಸಿದ್ದಪಡಿಸಿ ಕೊಟ್ಟಿದ್ದೇವೆ. ಮುಖ್ಯಮಂತ್ರಿಗಳು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
ಈ ಹಿಂದೆ ಜಿಲ್ಲಾಡಳಿತಕ್ಕೆ ಹಣ ಬಿಡುಗಡೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ವಿಶೇಷವಾಗಿ ಮಹಾನಗರ ಪಾಲಿಕೆಗೆ ನೇರವಾಗಿ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ನಗರದ ಪ್ರಮುಖ ವೃತ್ತಗಳಲ್ಲಿ ವಿಶೇಷ ವಿದ್ಯುತ್ ದೀಪಾಲಂಕರಗಳನ್ನ ಮಾಡಬೇಕೆಂದು ತೀರ್ಮಾನ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಸಭೆ ಕರೆದು ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಮೇಯರ್ ಶಿವಕುಮಾರ್ ಹೇಳಿದರು.
Key words: DPR 26 crores – mysore Dasara – celebrations- Mayor- Shivakumar